ವಿಶ್ವ ಪರಿಸರ ದಿನಾಚರಣೆ: ಚಿತ್ರಕಲಾ ಸ್ಪರ್ಧೆ

Update: 2019-05-25 15:56 GMT

ಉಡುಪಿ, ಮೇ 25: ಉಡುಪಿಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಕಚೇರಿ ವತಿಯಿಂದ 2019ನೇ ಸಾಲಿನ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.1ರಂದು ಬೆಳಗ್ಗೆ 10:00ಕ್ಕೆ ಉಡುಪಿ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾಯು ಮಾಲಿನ್ಯ ತಡೆಗಟ್ಟುವ ಕುರಿತು ಚಿತ್ರಲಾ ಸ್ಪರ್ಧೆ ಯನ್ನು ಆಯೋಜಿಸಲಾಗಿದೆ.

 ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಪ್ರಾಥಮಿಕ ಶಾಲಾ ವಿಭಾಗದಲ್ಲಿ 1ರಿಂದ 4ನೇ ತರಗತಿವರೆಗೆ ಹಾಗೂ 5ರಿಂದ 7ನೇ ತರಗತಿವರೆಗೆ, ಪ್ರೌಢಶಾಲಾ ವಿಬಾಗದಲ್ಲಿ 8ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಉಡುಪಿ ಪ್ರಾದೇಶಿಕ ಕಚೇರಿಯ ಸಹಾಯಕ ಪರಿಸರ ಅಧಿಕಾರಿ ಪ್ರಮೀಳಾ, ಮೊಬೈಲ್ ನಂ:9901226279ನ್ನು ಸಂಪರ್ಕಿಸುವಂತೆ ಪರಿಸರ ಅಧಿಕಾರಿ ಡಾ.ಎಚ್.ಲಕ್ಷ್ಮೀಕಾಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News