ಕ್ರೀಡಾ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Update: 2019-05-25 16:01 GMT

ಉಡುಪಿ, ಮೇ 25: 2018-19ನೇ ಸಾಲಿನಲ್ಲಿ ಮಾಧ್ಯಮಿಕ ಅಥವಾ ಪ್ರೌಢಶಾಲೆಯಲ್ಲಿ (6ರಿಂದ 10ನೆ ತರಗತಿ) ಓದುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅವರ 2018ರ ಜ.1ರಿಂದ 2019ರ ಮಾರ್ಚ್ 31ರವ ರೆಗಿನ ಕ್ರೀಡಾ ಸಾಧನೆಯನ್ನು ಪರಿಗಣಿಸಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ವಾಷಿಕ 10,000 ರೂ. ಪ್ರೋತ್ಸಾಹಿ ಕ್ರೀಡಾ ವೇತನ ನೀಡಲಾಗುತ್ತದೆ.

ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೊಂದಾಯಿತ ಕ್ರೀಡಾ ಸಂಸ್ಥೆ ನಡೆಸಿದ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು, ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿದವರು, ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸಿದ ಸ್ಕೂಲ್ ಗೇಮ್ಸ್ ಪೆಡರೇಶನ್ ಆಪ್ ಇಂಡಿಯಾ ಯೊಜನೆಯಡಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರು ಅಥವಾ ರ್ಟ್ರೋಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡ ಪ್ರತಿನಿಧಿಸಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಹ ಅ್ಯರ್ಥಿಗಳು ಕಚೇರಿಯ ಅಧಿಕೃತ ವೆಬ್‌ಸೈಟ್- http://serviceonline.gov.in/Karnataka- ಮೂಲಕ ಅರ್ಜಿಗಳನ್ನು ಜೂನ್ 30 ರ ಒಳಗೆ ಸಲ್ಲಿಸಬೇಕು. ಆನ್‌ಲೈನ್ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳ ಯಥಾ ಪ್ರತಿಯನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಜ್ಜರಕಾಡು ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಡಾ. ರೋಶನ್‌ಕುಮಾರ್ ಶೆಟ್ಟಿ, ಸಹಾಯಕ ನಿರ್ದೇಶಕರು, ಯುವ ಸಬಲೀರಣ ಮತ್ತು ಕ್ರೀಡಾ ಇಲಾಖೆ, ಉಡುಪಿ (ದೂರವಾಣಿ:0820-2521324, 9480886467) ಇವರನ್ನು ಸಂಪರ್ಕಿ ಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News