ಆರ್ಥಿಕ ಹಿಂದುಳಿದ ವರ್ಗಗಳಿಗೆ ಶೇ.10 ರಷ್ಟು ಮೀಸಲಾತಿ ಸೌಲಭ್ಯ

Update: 2019-05-25 17:18 GMT

ಬೆಂಗಳೂರು, ಮೇ 25: ಭಾರತ ಸಂವಿಧಾನದ (103ನೇ ತಿದ್ದುಪಡಿ) ಕಾಯ್ದೆ, 2019 ರನ್ವಯ ಸಂವಿಧಾನದ ಅನುಚ್ಫೇಧ 15(6)ರಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(6)ರ ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10 ರಷ್ಟು ಮೀಸಲಾತಿ ಒದಗಿಸಲು ಅವಕಾಶ ಕಲ್ಪಿಸಲಾಗಿದೆ.

ಭಾರತ ಸರಕಾರದ ನಾಗರಿಕ ಹುದ್ದೆಗಳು, ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೇ.10ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲು ಆದೇಶಿಸಲಾಗಿದ್ದು, ರಾಜ್ಯದ ಅರ್ಹ ಅಭ್ಯರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಸೌಲಭ್ಯವನ್ನು ಪಡೆಯಲು ಆದಾಯ ಮತ್ತು ಸ್ವತ್ತು ಪ್ರಮಾಣ ಪತ್ರಗಳನ್ನು ನಾಡ ಕಚೇರಿ ಮೂಲಕ ವಿತರಿಸಲು ಅನುಮತಿ ನೀಡಿ ಆದೇಶಿಸಲಾಗಿದೆ.

ಮೀಸಲಾತಿ ಕೇಂದ್ರ ಸರಕಾರದ ನಾಗರಿಕ ಹುದ್ದೆಗಳು, ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಮಾತ್ರ ಅನ್ವಯವಾಗುತ್ತದೆ. ರಾಜ್ಯ ಸರಕಾರದ ನಾಗರಿಕ ಹುದ್ದೆಗಳು, ಸೇವೆಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವುದಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News