60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿಗೆ 41 ಸ್ಥಾನಗಳು

Update: 2019-05-25 17:29 GMT

ಇಟಾನಗರ,ಮೇ 25: 60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಎಲ್ಲ ಕ್ಷೇತ್ರಗಳ ಫಲಿತಾಂಶ ಹೊರಬಿದ್ದಿದ್ದು,ಬಿಜೆಪಿ 41 ಸ್ಥಾನಗಳನ್ನು ಗೆದ್ದಿದೆ ಎಂದು ಚುನಾವಣಾಧಿಕಾರಿಯೋರ್ವರು ಶನಿವಾರ ತಿಳಿಸಿದರು.

 ಮೂವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರಿಂದ 57 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆದಿತ್ತು.

ಜೆಡಿಯು ಏಳು,ಎನ್‌ಪಿಪಿ ಐದು,ಕಾಂಗ್ರೆಸ್ ನಾಲ್ಕು ಮತ್ತು ಪಿಪಿಎ ಒಂದು ಸ್ಥಾನಗಳನ್ನು ಗೆದ್ದಿದ್ದರೆ,ಎರಡು ಸ್ಥಾನಗಳು ಪಕ್ಷೇತರರ ಪಾಲಾಗಿವೆ.

ಶುಕ್ರವಾರ ಅಪ್ಪರ್ ಸುಬನ್‌ಸಿರಿ ಜಿಲ್ಲೆಯ ಡಾಪೊರಿಜೊ,ಡುಂಪೊರಿಜೊ ಮತ್ತು ರಗಾ ವಿಧಾನಸಭಾ ಕ್ಷೇತ್ರಗಳಲ್ಲಿ ಮತ ಎಣಿಕೆ ವಿಳಂಬಗೊಂಡಿತ್ತು ಎಂದು ಅಧಿಕಾರಿ ತಿಳಿಸಿದರು.

ಗೆದ್ದಿರುವ ಪ್ರಮುಖ ಬಿಜೆಪಿ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿ ಪೆಮಾ ಖಂಡು,ಉಪ ಮುಖ್ಯಮಂತ್ರಿ ಚೌನಾ ಮೀನ್ ಸೇರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News