​ವಿದ್ಯಾರ್ಥಿಗಳ ಮೇಲೆ ಪೋಲೀಸರ ದೌರ್ಜನ್ಯ ಸಹಿಸಲು ಅಸಾಧ್ಯ: ಎಸ್.ಡಿ.ಪಿ.ಐ.

Update: 2019-05-25 18:15 GMT

ಮಂಗಳೂರು: ಮುಸ್ಲಿಂ ವಿದ್ಯಾರ್ಥಿಗಳ ಮೇಲೆ ಎ.ಬಿ.ವಿ.ಪಿ. ಗೂಂಡಗಳು ಹಲ್ಲೆ ನಡೆಸಿದ್ದನ್ನು ಖಂಡಿಸಿ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ  ಸಾಂವಿಧಾನಿಕ ರೀತಿಯಲ್ಲಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಏಕಾಏಕಿಯಾಗಿ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ ವೆಸಗಿದನ್ನು ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ತೀವ್ರವಾಗಿ ಖಂಡಿಸುತ್ತದೆ ಎಂದು ಎಸ್ಡಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ತಿಳಿಸಿದ್ದಾರೆ.

ಹಲ್ಲೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ ಆರೋಪಿಗಳನ್ನು ಬಂಧಿಸಿ ನ್ಯಾಯ ಒದಗಿಸಬೇಕಾದ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದು ಮಾತ್ರವಲ್ಲದೇ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೆಲವು ವಿದ್ಯಾರ್ಥಿ ನಾಯಕರನ್ನು ಬಂಧಿಸಿ ಠಾಣೆಯಲ್ಲು ದೌರ್ಜನ್ಯ ನಡೆಸಿದ ಪೊಲೀಸರ ಕ್ರೌರ್ಯವನ್ನು ಸಹಿಸಲು ಅಸಾಧ್ಯ ಇದನ್ನು ಎಸ್ ಡಿ ಪಿ ಐ ಬಹಳ ಗಂಭೀರವಾಗಿ ಪರಿಗಣಿಸಿ ಕ್ಯಾಂಪಸ್ ಫ್ರಂಟ್ ನ ಮುಂದಿನ ಕಾನೂನು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುತ್ತದೆ ಎಂದರು.

ಆದುದರಿಂದ ಈ ಪ್ರಕರಣವನ್ನು  ದ.ಕ ಜಿಲ್ಲಾ ಪೋಲೀಸ್ ವರಿಷ್ಠಾದಿಕರಿಗಳು ಗಂಭೀರವಾಗಿ ಪರಿಗಣಿಸಿ ಅಪ್ರಚೋದಿತವಾಗಿ ಗೂಂಡಾ ರೀತಿಯಲ್ಲಿ ದಾಳಿ ನಡೆಸಿದಂತಹ ಪೊಲೀಸ್ ರನ್ನು ಅಮಾನತು ಮಾಡಿ ತನಿಖೆ ನಡೆಸಬೇಕಾಗಿ ಮತ್ತು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಎಬಿವಿಪಿ ಗೂಂಡಾಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರಗಿಸಬೇಕೆಂದು ಎಸ್ಡಿಪಿಐ ದ.ಕ.ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News