ಮೂಳೂರು : ಸುನ್ನಿ ಸೆಂಟರ್ ನಲ್ಲಿ ಸಾಮೂಹಿಕ ಇಫ್ತಾರ್ ಕೂಟ

Update: 2019-05-26 09:42 GMT

ಕಾಪು: ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಅದೀನ ಸಂಸ್ಥೆಯಾಗಿರುವ ಮೂಳೂರು ಮರ್ಕಝ್ ತಅಲೀಮಿಲ್ ಇಹ್ಸಾನ್‍ನಲ್ಲಿ ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ ಯುಎಇ ರಾಷ್ಟ್ರೀಯ ಸಮಿತಿಯ ವತಿಯಿಂದ ಶನಿವಾರ ಸಾಮೂಹಿಕ ಇಫ್ತಾರ್ ಕೂಟ ನಡೆಯಿತು. 

ಸಂಸ್ಥೆಯ ಅನಾಥ ಹಾಗೂ ನಿರ್ಗತಿಕ ಮಕ್ಕಳು ಮತ್ತು ಕುಂಬೋಲ್ ಸಾದಾತ್‍ಗಳ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮ ಅಲ್ ಇಹ್ಸಾನ್ ಎಜುಕೇಶನ್ ಸೆಂಟರ್ ಕಾರ್ಯಾಧ್ಯಕ್ಷ ಅಸ್ಸಯ್ಯಿದ್ ಅಹಮ್ಮದ್ ಮುಕ್ತಾರ್ ತಂಙಳ್ ಕುಂಬೋಳ್ ಅವರ ನೇತೃತ್ವದಲ್ಲಿ ಜಲಾಲಿಯ್ಯ ದ್ಸಿಕ್ರ್ ನಡೆಯಿತು.

ಅಲ್ ಇಹ್ಸಾನ್ ವುಮೆನ್ಸ್ ಶರೀಅತ್ ಕಾಲೇಜಿನ ಪ್ರಾಂಶುಪಾಲ  ಮುಹಮ್ಮದ್ ಅಲ್ ಖಾಸಿಮಿ ಅಳಕೆಮಜಲ್ ಅವರು ರಮಝಾನ್  ಕುರಿತು ಪ್ರಭಾಷಣ ನಡೆಸಿದರು.

ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ರಮಝಾನ್ ಪ್ರಯುಕ್ತ ನಡೆಯುವ ಇಫ್ತಾರ್ ಕೂಟಗಳು ಸಮಾಜಕ್ಕೆ ಸಾಮಾಜಿಕ ಸಾಮರಸ್ಯದ ಸಂದೇಶವನ್ನು ಬೀರುವ ಆಚರಣೆಯಾಗಿದೆ ಎಂದರು.

ಡಿಕೆಎಸ್ಸಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಹಾತಿಂ ಕಾನ ಅಬ್ದುಲ್ ಖಾದರ್ ಕಂಚಿ, ಮಾಜಿ ಕಾರ್ಯಾಧ್ಯಕ್ಷ ಇಸ್ಮಾಯಿಲ್ ಹಾಜಿ ಕಿನ್ಯ, ದಮಾಮ್ ವಲಯದ ಅಧ್ಯಕ್ಷ ಹಸನ್ ಬಾವಾ ಕುಪ್ಪೆಪದವು, ಉಡುಪಿ ಸಂಯುಕ್ತ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ನೇಜಾರ್, ಅಲ್ ಇಹ್ಸಾನ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ಯು.ಕೆ. ಮುಸ್ತಫಾ ಸಅದಿ, ಮೂಳೂರು ಮರ್ಕಝ್ ಮತ್ತು ಡಿಕೆಎಸ್ಸಿ  ಪ್ರತಿನಿಧಿಗಳು, ಪದಾಧಿಕಾರಿಗಳು ಹಾಗು ಇತರರು ಇಫ್ತಾರ್ ಕೂಟದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News