ಮೇ 28ಕ್ಕೆ ಬರಪೀಡಿತ ಸ್ಥಳಗಳಿಗೆ ಸಚಿವ ಆರ್.ವಿ.ದೇಶಪಾಂಡೆ ಭೇಟಿ
Update: 2019-05-26 20:08 IST
ಧಾರವಾಡ, ಮೇ 26: ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮೇ 28 ರಂದು ಧಾರವಾಡ ಜಿಲ್ಲಾ ಪ್ರವಾಸ ಕೈ ಕೊಂಡಿದ್ದಾರೆ.
ಮೇ 28ರ ಮಧ್ಯಾಹ್ನ 2 ಗಂಟೆಗೆ ಹಾವೇರಿಯಿಂದ ಆಗಮಿಸುವ ಸಚಿವ ದೇಶಪಾಂಡೆ, ಮಧ್ಯಾಹ್ನ 3 ಗಂಟೆ ವರೆಗೆ ಧಾರವಾಡ ಜಿಲ್ಲೆಯಲ್ಲಿನ ವಿವಿಧ ಬರಪೀಡಿತ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಕಾಟನ್ ಮಾರುಕಟ್ಟೆ ರಸ್ತೆಯಲ್ಲಿರುವ ಸಾಂಸ್ಕೃತಿಕ ಭವನದಲ್ಲಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಾಗೂ ಕೈಗೊಂಡ ಪರಿಹಾರ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಜರುಗಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.