×
Ad

ಶಿವಮೊಗ್ಗ: ಆಹಾರ ಸೇವಿಸಿ 30ಕ್ಕೂ ಅಧಿಕ ಮಂದಿ ಅಸ್ವಸ್ಥ- ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ

Update: 2019-05-26 22:27 IST

ಶಿವಮೊಗ್ಗ, ಮೇ 26: ಮನೆಯೊಂದರಲ್ಲಿ ಆಯೋಜಿತವಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿದ್ದ 30 ಕ್ಕೂ ಅಧಿಕ ಜನರು ಅಸ್ವಸ್ಥಗೊಂಡು, ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಭಾನುವಾರ ನಡೆದಿದೆ. 

ಅಸ್ವಸ್ಥರನ್ನು ಶಿಕಾರಿಪುರ ಪಟ್ಟಣದ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ಕೆ.ಎ.ದಯಾನಂದ್‍ ರವರು ಭಾನುವಾರ ಸರ್ಕಾರಿ ಆಸ್ಪತ್ರೆಗೆ ಭೇಟಿಯಿತ್ತು ಅಸ್ವಸ್ಥರ ಆರೋಗ್ಯ ವಿಚಾರಣೆ ನಡೆಸಿದರು. ಅಸ್ವಸ್ಥರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದರು. 

ಘಟನೆ ಹಿನ್ನೆಲೆ: ಶಿಕಾರಿಪುರ ತಾಲೂಕಿನ ಅಣ್ಣಾಪುರ ಗ್ರಾಮದ ಗಣೇಶ್ ಶೇಟ್ರು ಎಂಬುವರ ಮನೆಯಲ್ಲಿ ಸತ್ಯನಾರಾಯಣ ಪೂಜೆ ಹಾಗೂ ಹೋಂ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇವರ ಮನೆಯಲ್ಲಿ ಊಟ ಮಾಡಿದ್ದ ಸುಮಾರು 29 ಕ್ಕೂ ಅಧಿಕ ಜನರಿಗೆ ಭಾನುವಾರ ಬೆಳಿಗ್ಗೆಯಿಂದ ವಾಂತಿ-ಭೇದಿ ಕಾಣಿಸಿಕೊಂಡಿತ್ತು. ಕೆಲವರು ತೀವ್ರ ಅಸ್ವಸ್ಥಗೊಂಡಿದ್ದರು. 

ತಕ್ಷಣವೇ ಅಸ್ವಸ್ಥರನ್ನು ಶಿಕಾರಿಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಎಲ್ಲರು ಚೇತರಿಸಿಕೊಂಡಿದ್ದು, ಯಾವುದೇ ತೊಂದರೆಯಿಲ್ಲ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News