ವಿಶ್ವವಾಣಿ ಸಂಪಾದಕ ವಿಶ್ವೇಶ್ವರ ಭಟ್, ಸಿಬ್ಬಂದಿ ವರ್ಗದ ವಿರುದ್ಧ ಎಫ್ಐಆರ್

Update: 2019-05-27 04:35 GMT

ಬೆಂಗಳೂರು, ಮೇ 26: ಮಾಜಿ ಪ್ರಧಾನಿ ದೇವೇಗೌಡ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ಧ ಸುಳ್ಳು ಸುದ್ದಿ ಪ್ರಕಟಿಸಿದ ಆರೋಪದ ಮೇಲೆ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಸಿಬ್ಬಂದಿ ವರ್ಗದ ವಿರುದ್ಧ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸುಳ್ಳು ಸುದ್ಧಿ ಪ್ರಕಟಿಸಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾನೂನು ವಿಭಾಗದ ರಾಜ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಎಸ್.ಪಿ ಎಂಬವರು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅದರಂತೆ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ ಹಾಗೂ ಸಿಬ್ಬಂದಿ ವರ್ಗದ ವಿರುದ್ಧ ಐಪಿಸಿ 1860 (500, 501, 506, 504, 406, 420, 468, 499) ಅಡಿ ಎಫ್ಐಆರ್ ದಾಖಲಾಗಿದೆ.

ಪ್ರಕರಣ ವಿವರ: ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಸೋತ ಬಳಿಕ ಕುಡಿದ ಮತ್ತಿನಲ್ಲಿ ಕೂಗಾಡಿ, ರಂಪಾಟ ನಡೆಸಿ ದೇವೇಗೌಡ ಜೊತೆ ವಾಗ್ವಾದ ನಡೆಸಿದ್ದರು ಎಂದು ವಿಶ್ವವಾಣಿ ಪತ್ರಿಕೆಯಲ್ಲಿ ಮೇ 25 ರಂದು ಸುದ್ದಿ ಪ್ರಕಟವಾಗಿತ್ತು. ಈ ಸಂಬಂಧ ಸ್ವತಃ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದರು. 

'ಕನ್ನಡ ಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ' ಎಂದು ಟ್ವೀಟ್ ಮಾಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News