ಮೋದಿಗೆ ಇಮ್ರಾನ್ ಖಾನ್ ಅಭಿನಂದನೆ

Update: 2019-05-26 17:46 GMT

ಇಸ್ಲಾಮಬಾದ್,ಮೇ 2: ಪಾಕ್ ಪ್ರಧಾನಿ ಇಮ್ರಾನ್‌ಖಾನ್ ರವಿವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ದೂರವಾಣಿ ಕರೆ ಮಾಡಿ ಲೋಕಸಭಾ ಚುನಾ ವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪ್ರಚಂಡ ಗೆಲುವಿಗಾಗಿ ಅವರನ್ನು ಅಭಿನಂದಿಸಿದ್ದಾರೆ.

ಜನತೆಯ ಅಭ್ಯುದಯಕ್ಕಾಗಿ ಉಭಯದೇಶಗಳು ಜೊತೆಯಾಗಿ ಶ್ರಮಿಸಬೇಕೆಂಬ ಇಚ್ಛೆಯನ್ನು ಇಮ್ರಾನ್ ಖಾನ್ ಅವರು ವ್ಯಕ್ತಪಡಿಸಿದ್ದಾರೆಂದು ಪಾಕಿಸ್ತಾನದ ವಿದೇಶಾಂಗ ಕಾರ್ಯಾಲಯದ ವಕ್ತಾರ ಮುಹಮ್ಮದ್ ಫೈಝಲ್ ಟ್ವೀಟಿಸಿದ್ದಾರೆ.

 ‘‘ದಕ್ಷಿಣ ಏಶ್ಯದಲ್ಲಿ ಶಾಂತಿ, ಪ್ರಗತಿ ಹಾಗೂ ಸಮೃದ್ಧಿಗಾಗಿನ ತನ್ನ ದೂರದರ್ಶಿತ್ವವನ್ನು ಪುನರುಚ್ಚರಿಸಿರುವ ಪ್ರಧಾನಿ ಇಮ್ರಾನ್‌ಖಾನ್ ಅವರು, ಈ ಗುರಿಗಳನ್ನು ಈಡೇರಿಸಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜೊತೆಗೂಡಿ. ಶ್ರಮಿಸುವ ಆಶಯವನ್ನು ವ್ಯಕ್ತಪಡಿಸಿದ್ದಾರೆ’’ ಎಂದು ಫೈಸಲ್ ಟ್ವೀಟ್ ಮಾಡಿದ್ದಾರೆ.

  ಕಳೆದ ಎಪ್ರಿಲ್‌ನಲ್ಲಿ ಇಮ್ರಾನ್ ಖಾನ್ ಅವರು ಸಂರ್ಶನವೊಂದರಲ್ಲಿ, ಒಂದು ವೇಳೆ ಭಾರತದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದಲ್ಲಿ ಭಾರತದ ಜೊತೆ ಶಾಂತಿ ಮಾತುಕತೆ ನಡೆಸಲು ಹಾಗೂ ಕಾಶ್ಮೀರ ವಿವಾದವನ್ನು ಬಗೆಹರಿಸಲು ಉತ್ತಮ ಅವಕಾಶ ದೊರೆಯಲಿದೆಯೆಂದು ಇಮ್ರಾನ್ ಖಾನ್ ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News