ಜೂಜಾಡುತ್ತಿದ್ದ ಐವರ ಬಂಧನ: 43 ಸಾವಿರ ರೂ.ನಗದು ಜಪ್ತಿ
Update: 2019-05-27 17:55 IST
ಬೆಂಗಳೂರು, ಮೇ 27: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಐವರನ್ನು ಬಂಧಿಸಿ, 43,530 ರೂ.ನಗದು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ನಿವಾಸಿಗಳಾದ ಉಮೇಶ್(32), ಶಶಿಕುಮಾರ್, ವೆಂಕಟೇಶ(22), ನಾರಾಯಣ(34), ಮಂಜೇಶ್(31) ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೋಡಿಪಾಳ್ಯ ಹಮ್ಮಿಪುರ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಕೆಲವರು ಜೂಜಾಟ ಆಡುತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ರವಿವಾರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಇವರಿಂದ 43,530 ರೂ.ನಗದು ಜಪ್ತಿ ಮಾಡಿದ್ದು, ಈ ಸಂಬಂಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.