ಮಹಿಳಾ ಬೀದಿನಾಟಕ, ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನ

Update: 2019-05-27 12:43 GMT

ಮಂಗಳೂರು, ಮೇ 27: ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 2019-20ನೇ ಸಾಲಿನಲ್ಲಿ ಸರಕಾರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ವಿಷಯಾಧಾರಿತ ಬೀದಿನಾಟಕ ಹಾಗೂ ಸಂಗೀತ ಕಾರ್ಯಕ್ರಮಗಳನ್ನು ಪ್ರದರ್ಶಿಸಲು ಮಹಿಳಾ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಕಲಾ ತಂಡಗಳು ಬೀದಿನಾಟಕ ಪ್ರದರ್ಶನದಲ್ಲಿ ಅನುಭವ ಹೊಂದಿರಬೇಕು. ಅಭಿನಯ, ಹಾಡು, ಸಂಗೀತ, ನಿರೂಪಣೆ ಸಾಮರ್ಥ್ಯ ಹೊಂದಿರಬೇಕು. ಒಂದು ಬೀದಿನಾಟಕ ತಂಡದಲ್ಲಿ ಕಡ್ಡಾಯವಾಗಿ ಎಂಟು ಜನ ಮಹಿಳಾ ಕಲಾವಿದರಿರಬೇಕು. ತಂಡದಲ್ಲಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗದ ಓರ್ವ ಕಲಾವಿದರನ್ನು ಹೊಂದಿರಬೇಕು.

ಸಂಗೀತ ತಂಡದಲ್ಲಿ ಮೂರು ಜನ ಮಹಿಳಾ ಕಲಾವಿದರು ಇರಬೇಕು. ಈ ಪೈಕಿ ಓರ್ವರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ತಂಡದ ಎಲ್ಲ ಕಲಾವಿದರು ಬ್ಯಾಂಕ್ ಖಾತೆ ಹಾಗೂ ಪ್ಯಾನ್‌ಕಾರ್ಡ್ ಹೊಂದಿರಬೇಕು. ಅರ್ಜಿಯೊಂದಿಗೆ ಕಲಾವಿದರ ಭಾವಚಿತ್ರ, ಆಧಾರ್‌ಕಾರ್ಡ್, ಬ್ಯಾಂಕ್ ಖಾತೆ, ಪಾನ್ ಕಾರ್ಡ್ ಝೆರಾಕ್ಸ್ ಪ್ರತಿಯನ್ನು ಲಗತ್ತಿಸುವುದು ಕಡ್ಡಾಯವಾಗಿದೆ.

ಅರ್ಜಿಯನ್ನು ಜೂ.3ರಂದು ಅಪರಾಹ್ನ 3 ಗಂಟೆಯೊಳಗಾಗಿ ಖುದ್ದಾಗಿ ಅಥವಾ ಅಂಚೆ ಮೂಲಕ ತಲುಪುವಂತೆ ಅರ್ಜಿ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ವಾರ್ತಾಧಿಕಾರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಂಗಳೂರು ಈ ವಿಳಾಸಕ್ಕೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 0824- 2424254ನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News