×
Ad

ಅರ್ಕುಳ: ಉಚಿತ ನೋಟ್ ಪುಸ್ತಕ ವಿತರಣೆ

Update: 2019-05-27 18:39 IST

ಬಂಟ್ವಾಳ, ಮೇ 27: ಅರ್ಕುಳ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇತ್ತೀಚೆಗೆ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಆವರಣದಲ್ಲಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕವನ್ನು ಫರಂಗಿಪೇಟೆಯ ತೃಪ್ತಿ ಕನ್ಸ್ಟ್ರಕ್ಷನ್ಸ್ ಮಾಲಕ ತಾರಾನಾಥ ಕೊಟ್ಟಾರಿ ಅವರು ವಿತರಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ರಜೆ ಕಳೆದು ಶಾಲೆ ಪ್ರಾರಂಭವಾಗುವ ಸಮಯದಲ್ಲಿ ಶಾಲಾ ಮಕ್ಕಳನ್ನು ಗುರುತಿಸಿ ಪ್ರೊತ್ಸಾಹಿಸುವ ಕಾರ್ಯಕ್ರಮ ಹಮ್ಮಿಕೊಂಡಾಗ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿಯನ್ನು ಮೂಡಲು ಸಾಧ್ಯವಾಗುತ್ತದೆ ಎಂದರು.

ಬಿಎಸೆನೆಲ್ ಮಾರುಕಟ್ಟೆ ಅಧಿಕಾರಿ ಕಂಪ ಸದಾನಂದ ಆಳ್ವ ಮುಖ್ಯ ಅತಿಥಿಯಾಗಿ ಮಾತನಾಡಿದರು. ಅರ್ಕುಳ ಚಾರಿಟೇಬಲ್ ಟ್ರಸ್ಟ್‍ನ ಅಧ್ಯಕ್ಷ ಅರ್ಕುಳ ಬೀಡು ವಜ್ರನಾಭ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. 

ವೇದಿಕೆಯಲ್ಲಿ ಅರ್ಕುಳ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಆಶಾ ಪ್ರಕಾಶ್, ಮನೋಜ್ ತುಪ್ಪೆಕಲ್ಲು, ಆಶಾ ತುಪ್ಪೆಕಲ್ಲು ಮೊದಲಾದವರಿದ್ದರು. ಸ್ವಸಹಾಯ ಗುಂಪುಗಳ ಮೇಲ್ವಿಚಾರಕಿ ಶೋಭಾ ವಂದಿಸಿ, ಮಂಟಮೆ ದಿನಕರ ಕರ್ಕೇರ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News