ಬಂಟ್ವಾಳ ಜೈನ್ ಮಿಲನ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಬಂಟ್ವಾಳ, ಮೇ 27: 1008 ಭಗವಾನ್ ಶ್ರೀ ಆದಿನಾಥ ಸ್ವಾಮಿ ಜಿನಚೈತ್ಯಾಲಯ ಇದರ ಜಿನಬಿಂಬ ಪ್ರತಿಷ್ಟಾ ಮಹೋತ್ಸವದ 50ನೇ ವರ್ಧಂತ್ಯೋತ್ಸವದ ಅಂಗವಾಗಿ ಬಂಟ್ವಾಳ ಜೈನ್ ಮಿಲನ ಆಶ್ರಯದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಭಗವಾನ್ ಶ್ರೀ ಆದಿನಾಥ ಸ್ವಾಮಿ ಜಿನ ಚೈತ್ಯಾಲಯದಲ್ಲಿ ಜರಗಿತು.
ಜೈನಮಠ ಮೂಡಬಿದ್ರೆ ಜಗದ್ಗುರು ಪರಮಪೂಜ್ಯ ಭಾರತಭೂಷಣ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನವಿತ್ತರು.
ಬಂಟ್ವಾಳದ ಶ್ರಾವಕರು ಎಲ್ಲರನ್ನೂ ಒಗ್ಗೂಡಿಸಿಕೊಂಡು ಬಸದಿಯ ಕೆಲಸಕಾರ್ಯಗಳನ್ನು ನಡೆಸುತ್ತಿರುವುದು ಶ್ಲಾಘನೀಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ನುಡಿದರು.
ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಭಾರತೀಯ ಜೈನ್ ಮಿಲನ್ ಬಂಟ್ವಾಳ ಇದರ ಅಧ್ಯಕ್ಷ ಡಾ.ಸುದೀಪ್ ಕುಮಾರ್ ಸಿದ್ದಕಟ್ಟೆ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗ ವಲಯ-8ರ ಉಪಾಧ್ಯಕ್ಷ ಸುದರ್ಶನ್ ಜೈನ್, ಭಾರತೀಯ ಜೈನ್ ಮಿಲನ್ ಮಂಗಳೂರು ವಿಭಾಗದ ಜಯರಾಜ್ ಕಂಬಳಿ, ಮಂಗಳೂರು ವಿಭಾಗ ವಲಯ-8ರ ಕಾರ್ಯದರ್ಶಿ ಸುಭಾಸ್ಚಂದ್ರ ಜೈನ್ ಉಪಸ್ಥಿತರಿದ್ದರು.
ದೀಪಕ್ ಕುಮಾರ್ ಇಂದ್ರ ಸ್ವಾಗತಿಸಿದರು. ಕಾರ್ಯದರ್ಶಿ ಸನ್ಮತಿ ಜಯಕೀರ್ತಿ ವಂದಿಸಿ, ಹರ್ಷರಾಜ್ ಬಳ್ಳಾಲ್ ಕಾರ್ಯಕ್ರಮ ನಿರೂಪಿಸಿದರು.