×
Ad

ವಿಧಾನಸೌಧದಲ್ಲಿ ಮುಖ್ಯಮಂತ್ರಿಯಿಂದ ಅಹವಾಲು ಸ್ವೀಕಾರ

Update: 2019-05-27 20:28 IST

ಬೆಂಗಳೂರು, ಮೇ 27: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಸೋಮವಾರ, ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮದಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸುಮಂಗಲಾ ಅವರಿಗೆ ಎರಡು ಪುಟ್ಟ ಮಕ್ಕಳಿದ್ದು ಗಂಡ ಅಪಘಾತದಲ್ಲಿ ಮೃತರಾಗಿದ್ದಾರೆ. ಜೀವನೋಪಾಯಕ್ಕಾಗಿ ಅತಿಥಿ ಶಿಕ್ಷಕಿಯ ಕರ್ತವ್ಯವನ್ನು ಮುಂದುವರೆಸುವಂತೆ ಮನವಿ ಮಾಡಿದರು.

ಇದಕ್ಕೆ ಸ್ಥಳದಲ್ಲೆ ಸ್ಪಂದಿಸಿದ ಸಿಎಂ ಕುಮಾರಸ್ವಾಮಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಕೆ.ಆರ್.ನಗರದ ರಾಧಾ, ರಾಜಶ್ರೀ, ಮಂಜುಳಾ ಎಸ್. ಹಾಗೂ ವೀಣಾ ಅವರು ಹೆಚ್ಚುವರಿ ಶಿಕ್ಷಕರ ಸಮಸ್ಯೆ ಪರಿಹಾರಕ್ಕೆ ಮರು ಕೌನ್ಸಿಲಿಂಗ್ ಮಾಡುವಂತೆ ಮನವಿ ಮಾಡಿದರು. ಈ ವಿಷಯವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಭರವಸೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News