ರಂಗ ಶಿಕ್ಷಣ ಡಿಪ್ಲೋಮಕ್ಕೆ ಅರ್ಜಿ ಆಹ್ವಾನ

Update: 2019-05-27 16:24 GMT

ಉಡುಪಿ, ಮೇ 27: ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದಿರುವ ರಂಗ ಶಿಕ್ಷಣ ಡಿಪ್ಲೋಮಾಕ್ಕೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಶಿಕ್ಷಣದ ಅವಧಿ ಒಂದು ವರ್ಷ. ಕನಿಷ್ಠ ವಿದ್ಯಾರ್ಹತೆ ಎಸೆಸೆಲ್ಸಿ ಆಗಿದ್ದು, ಪದವೀಧರರಿಗೆ ಆದ್ಯತೆ ನೀಡಲಾಗುವುದು. ಕರ್ನಾಟಕ ಹಾಗೂ ಭಾರತದ ರಂಗತಜ್ಞರು ಮತ್ತು ಅತಿಥಿ ಉಪನ್ಯಾಕರಿಂದ ತರಗತಿಗಳು ನಡೆಯಲಿವೆ.

ಒಂದು ವರ್ಷದಲ್ಲಿ ಭಾರತೀಯ ರಂಗಭೂಮಿ,ಕನ್ನಡ ರಂಗಭೂಮಿ ಅಲ್ಲದೇ ಸಾಹಿತ್ಯ ಪರಂಪರೆ, ಪಾಶ್ಚಾತ್ಯ ರಂಗಭೂಮಿ, ಅಭಿನಯ, ಆಹಾರ್ಯ, ಶಿಕ್ಷಣ ದಲ್ಲಿ ರಂಗಭೂಮಿ ಕುರಿತಾದ ಸೈಧಾಂತಿಕ ಮತ್ತು ಪ್ರಾಯೋಗಿಕ ತರಗತಿಗಳು ನಡೆಯಲಿವೆ. ಕಳರಿ, ಯೋಗ, ಕಥಕ್ಕಳಿ, ಯಕ್ಷಗಾನ, ಕಂಸಾಳೆ, ಹೆಜ್ಜೆಮೇಳ, ವೀರಗಾಸೆ, ಪ್ರಸಾಧನ, ಬೆಳಕಿನ ವಿನ್ಯಾಸ, ರಂಗ ವಿನ್ಯಾಸ, ವಸ್ತ್ರ ವಿನ್ಯಾಸ ಮುಂತಾದ ಕಾರ್ಯಾಗಾರಗಳ ಜೊತೆಗೆ ಕಾವ್ಯ, ಸಿನೆಮಾ, ಚಿತ್ರಕಲೆ ಕುರಿತಾದ ಕಮ್ಮಟಗಳು ನಡೆಯುತ್ತವೆ. ಒಂದು ವರ್ಷದಲ್ಲಿ ನಾಲ್ಕರಿಂದ ಐದು ನಾಟಕಗಳ ಅಭ್ಯಾಸ ಹಾಗೂ ಪ್ರದರ್ಶನ ನಡೆಯುತ್ತದೆ.

ಆಸಕ್ತರು ಪ್ರಾಚಾರ್ಯರು, ಶ್ರೀಶಿವಕುಮಾರ ರಂಗ ಪ್ರಯೋಗ ಶಾಲೆ, ಸಾಣೆಹಳ್ಳಿ, ಹೊಸದುರ್ಗ ತಾಲೂಕು, ಚಿತ್ರದುರ್ಗ ಜಿಲ್ಲೆ ಈ ವಿಳಾಸಕ್ಕೆ ಬರೆದು ಪ್ರವೇಶ ಅರ್ಜಿಗಳನ್ನು ತರಿಸಿಕೊಳ್ಳಬಹುದು ಅಥವಾ ರಂಗಶಾಲೆಯ ವೆಬ್‌ಸೈಟ್ -www.theatreschoolsanehalli.org- ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್‌ಲೋಡ್ ಮಾಡಿ, ಜೂನ್ ತಿಂಗಳೊಳಗೆ ಅರ್ಜಿಯನ್ನು ರಂಗಶಾಲೆಗೆ ಸಲ್ಲಿಸಬೇಕು. ಆಯ್ಕೆಯಾದ ಅ್ಯರ್ಥಿಗಳಿಗೆ ಜು.15ರಿಂದ ತರಗತಿಗಳು ಪ್ರಾರಂಭಗೊಳ್ಳಲಿದೆ.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08199-243772, 9448398144, 9743095604ನ್ನು ಸಂಪರ್ಕಿಸುವಂತೆ ರಂಗಶಾಲೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News