ಅಪರಿಚಿತ ಶವ ಪತ್ತೆ: ವಾರಸುದಾರರಿಗೆ ಸೂಚನೆ
Update: 2019-05-27 22:19 IST
ಉಡುಪಿ, ಮೇ 27:ಕಾಪು ತಾಲೂಕು ನಂದಿಕೂರು ಗ್ರಾಮದ ಮುದರಂಗಡಿ ಜಂಕ್ಷನ್‌ನಲ್ಲಿರುವ ಬಸ್ ನಿಲ್ದಾಣದಲ್ಲಿ ಮೇ 23ರಂದು ಸುಮಾರು 45-50 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಮೃತ ದೇಹ ಕಂಡುಬಂದಿದೆ.
ಮೃತದೇಹ ಅರೆ ಕೊಳೆತ ಸ್ಥಿತಿಯಲ್ಲಿದ್ದು, ಇದನ್ನು ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದ ಶೈತ್ಯಾಗಾರದಲ್ಲಿ ಇರಿಸಲಾಗಿದೆ. ಈ ಮೃತ ವ್ಯಕ್ತಿಯ ಮಾಹಿತಿ/ ವಾರಸುದಾರರು ಯಾರಾದರೂ ಇದ್ದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪಡುಬಿದ್ರಿ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.