ಕೊಪ್ಪಳ: ಭಿಕ್ಷೆ ಬೇಡಿ ತಾಯಿಯ ಪೋಷಣೆ ಮಾಡುತ್ತಿದ್ದ ಬಾಲಕಿ; ರಕ್ಷಣೆಗೆ ಜಿಲ್ಲಾಡಳಿತ ಕ್ರಮ

Update: 2019-05-27 16:56 GMT

ಬೆಂಗಳೂರು, ಮೇ 27: ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯೊಬ್ಬಳು ಭಿಕ್ಷೆ ಬೇಡಿ ತಾಯಿಯನ್ನು ಪೋಷಿಸುತ್ತಿರುವ ಕುರಿತು ಪತ್ರಿಕೆಗಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಮುಖ್ಯಮಂತ್ರಿಗಳು ಆ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದು, ಅದರಂತೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ಮಹಿಳೆಗೆ ಸೂಕ್ತ ಚಿಕಿತ್ಸೆಯ ನಂತರ ಸ್ವಾಧಾರ ಕೇಂದ್ರಕ್ಕೆ ಸೇರಿಸಲು ಕ್ರಮ ವಹಿಸಲಾಗುತ್ತಿದೆ.

ಮಹಿಳೆ ದುರುಗವ್ವಳ ಮಕ್ಕಳನ್ನು ಬಾಲಕಿಯರ ಬಾಲಮಂದಿರ, ಬಾಲಕರ ಬಾಲ ಮಂದಿರಕ್ಕೆ ದಾಖಲಿಸಿ ಶಿಕ್ಷಣ ಒದಗಿಸಲು ಕ್ರಮ ವಹಿಸಲಾಗಿದೆ. 
ಇತ್ತೀಚಿನ ದಿನಗಳಲ್ಲಿ ಸೋದರಿ ತಮ್ಮೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ. ಪತ್ರಿಕೆಯಲ್ಲಿ ವರದಿ ನೋಡಿ ಕೊಪ್ಪಳಕ್ಕೆ ಆಗಮಿಸಿರುವುದಾಗಿ ಆಕೆಯ ಸೋದರ ಲಕ್ಷ್ಮಣ ತಿಳಿಸಿದ್ದು ಅವರನ್ನು ಮಕ್ಕಳ ಕಲ್ಯಾಣ ಸಮಿತಿ ಸಭೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News