ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2019-05-27 16:56 GMT

ಕಾರ್ಕಳ, ಮೇ 27: ಕಾಲು ನೋವಿನಿಂದ ಬಳಲುತ್ತಿದ್ದ ಕುಕ್ಕುಂದೂರು ಗ್ರಾಮದ ಬಲ್ಲೊಟ್ಟು ನಿವಾಸಿ ನಾರಾಯಣ ಮಂಜಯ್ಯ ಶೆಟ್ಟಿ(76) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 27ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆಬ್ರಿ: ವೈಯಕ್ತಿಕ ಕಾರಣದಿಂದ ಮನನೊಂದ ಕಳ್ತೂರು ಗ್ರಾಮದ ಸಂತೆಕಟ್ಟೆ ರಾಮ ಮಂದಿರದ ಎದುರು ನಿವಾಸಿ ನಾಗೇಶ್ ಮಲ್ಯ(63) ಎಂಬವರು ಮೇ 26ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News