ಪುತ್ತೂರು: ಕಾರು ಢಿಕ್ಕಿ; ಮಹಿಳೆಗೆ ಗಾಯ
Update: 2019-05-27 23:01 IST
ಪುತ್ತೂರು: ತಾಲೂಕಿನ ಕೆಯ್ಯೂರು ಗ್ರಾಮದ ಸಂತೋಷ್‍ನಗರ ಎಂಬಲ್ಲಿ ಪುತ್ತೂರು ಬೆಳ್ಳಾರೆ ರಸ್ತೆಯಲ್ಲಿ ಕಾರೊಂದು ಡಿಕ್ಕಿ ಪಾದಾಚಾರಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಕೆಯ್ಯೂರು ಗ್ರಾಮದ ಸಣ್ಣಂಗಳ ನಿವಾಸಿ ಬಾಲಕೃಷ್ಣ ರೈ ಅವರ ಪತ್ನಿ ಸರಸ್ವತಿ (55) ಗಾಯಗೊಂಡವರು. ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ಸರಸ್ವತಿ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಪುತ್ತೂರು ಕಡೆಯಿಂದ ಬೆಳ್ಳಾರೆ ಕಡೆಗೆ ಬಾಲಕೃಷ್ಣ ಗೌಡ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು ಡಿಕ್ಕಿ ಹೊಡೆದಿರುವುದಾಗಿ ಆರೋಪಿಸಲಾಗಿದೆ.
ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.