ಡಿಕೆಶಿ ಜೊತೆ ಪಕ್ಷೇತರ ಶಾಸಕ ನಾಗೇಶ್ ಚರ್ಚೆ

Update: 2019-05-28 14:52 GMT

ಬೆಂಗಳೂರು, ಮೇ 28: ವಿದೇಶ ಪ್ರವಾಸಕ್ಕೆ ಹೋಗಿ ನಿನ್ನೆ ತಡರಾತ್ರಿಯಷ್ಟೇ ಹಿಂದಿರುಗಿದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಬಿಜೆಪಿಯ ಆಪರೇಷನ್ ಕಮಲಕ್ಕೆ ತಿರುಗೇಟು ನೀಡುವ ಕಾರ್ಯಾಚರಣೆಗೆ ಇಳಿದಿದ್ದಾರೆ.

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್.ನಾಗೇಶ್‌ರನ್ನು ಸದಾಶಿವನಗರದಲ್ಲಿರುವ ತಮ್ಮ ನಿವಾಸಕ್ಕೆ ಕರೆಸಿಕೊಂಡ ಶಿವಕುಮಾರ್, ಯಾವುದೇ ಕಾರಣಕ್ಕೂ ಆಪರೇಷನ್ ಕಮಲಕ್ಕೆ ಬಲಿಯಾಗದಂತೆ ಮನವೊಲಿಸುವಲ್ಲಿ ಯಶಸ್ವಿಯಾದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News