ಜಮ್ಮು-ಕಾಶ್ಮೀರ: ಭದ್ರತಾ ಪಡೆಗಳ ಗುಂಡಿಗೆ ಇಬ್ಬರು ಉಗ್ರರ ಬಲಿ

Update: 2019-05-28 15:15 GMT

ಶ್ರೀನಗರ,ಮೇ 28: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಇಬ್ಬರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ.

ಕೋಕರನಾಗ್‌ನ ಅರಣ್ಯ ಪ್ರದೇಶದಲ್ಲಿ ಉಗ್ರರ ಇರುವಿಕೆಯ ಬಗ್ಗೆ ಬೇಹುಮಾಹಿತಿ ಪಡೆದಿದ್ದ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಉಗ್ರರು ಗುಂಡುಗಳನ್ನು ಹಾರಿಸಿದ್ದರು. ಇದು ಗುಂಡುಗಳ ವಿನಿಮಯಕ್ಕೆ ಕಾರಣವಾಗಿದ್ದು,ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News