ಮೋದಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ

Update: 2019-05-29 13:01 GMT
ಫೈಲ್ ಚಿತ್ರ

ಬೆಂಗಳೂರು, ಮೇ 29: ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾಗಿಯಾಗಲಿದ್ದಾರೆ.

ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಕೋರಿ ಪ್ರಧಾನಿ ಕಚೇರಿಯಿಂದ ಸಿಎಂ ಕುಮಾರಸ್ವಾಮಿ ಅವರಿಗೆ ಮಂಗಳವಾರ ಅಧಿಕೃತ ಆಮಂತ್ರಣ ಬಂದಿದ್ದು, ಮೇ 30ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ಹೊಸದಿಲ್ಲಿಗೆ ಪ್ರಯಾಣ ಬೆಳೆಸಲಿದ್ದು, ಸಂಜೆ 7ಕ್ಕೆ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಎರಡನೆ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಆಂಧ್ರದ ನಿಯೋಜಿತ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ, ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಸೇರಿದಂತೆ ಹಲವು ಗಣ್ಯರು ಭಾಗವಹಿಸುವ ಸಾಧ್ಯತೆಗಳಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News