×
Ad

​ಮೇ 31: ಸಿಇಟಿ, ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

Update: 2019-05-29 18:32 IST

ಮಂಗಳೂರು, ಮೇ 29: ನಗರದ ದಿ ಕ್ಯಾಂಪಸ್ ಕರಿಯರ್ ಅಕಾಡಮಿ ಸಂಸ್ಥೆಯು ಸಿಇಟಿ ಮತ್ತು ನೀಟ್ ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಮೇ 31ರ ಬೆಳಗ್ಗೆ 9:30ಕ್ಕೆ ನಗರದ ವಲೆನ್ಸಿಯಾ-ನಂದಿಗುಡ್ಡೆ ರಸ್ತೆಯಲ್ಲಿರುವ ಬ್ಯಾರೀಸ್ ವಲೆನ್ಸಿಯಾ ಸಭಾಂಗಣದಲ್ಲಿ ನಡೆಯಲಿದೆ.

ಶಿಬಿರದಲ್ಲಿ ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ, ಹೋಮಿಯೋಪಥಿ, ಯೋಗ-ನ್ಯಾಚುರಾಪಥಿ, ಬಿಫಾರ್ಮ, ಫಾರ್ಮ ಡಿ., ಇಂಜಿನಿಯರಿಂಗ್ ಮತ್ತು ಫಾರ್ಮ ಸೈಯನ್ಸ್ ವಿವಿಧ ಕೋರ್ಸುಗಳಿಗೆ ನಡೆಯಲಿರುವ ಆನ್‌ಲೈನ್ ಸಿಇಟಿ/ನೀಟ್ ಕೌನ್ಸಿಲಿಂಗ್‌ನ ವಿಧಾನ, ದಾಖಲಾತಿ ಪರಿಶೀಲನೆ, ಬೇಕಾಗಿರುವ ಅಗತ್ಯ ದಾಖಲೆಗಳು, ಸೀಟುಗಳ ಆಯ್ಕೆ ಪ್ರಕಿೃಯೆ ಮತ್ತು ಪಿಯುಸಿ ಬಳಿಕ ಕಲಿಕೆಗಿರುವ ಅವಕಾಶಗಳ ಕುರಿತಂತೆ ಮಾಹಿತಿ ನೀಡಲಾಗುವುದು.

ಪ್ರವೇಶ ಉಚಿತವಾಗಿದ್ದು, ಕರಿಯರ್ ಗೈಡೆನ್ಸ್ ಆ್ಯಂಡ್ ಇನ್ಫೊರ್ಮೇಶನ್ ಸೆಂಟರ್‌ನ ಸ್ಥಾಪಕಾಧ್ಯಕ್ಷ ಉಮರ್ ಯು.ಎಚ್. ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಆಸಕ್ತರು ದೂ. ಸಂ. 0824-4261320, 9845054191ನ್ನು ಸಂಪರ್ಕಿಸಿ ಹೆಸರು ನೋಂದಾಯಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News