ಕೆಎಟಿಯಲ್ಲಿ ಖಾಲಿ ಇರುವ ಸ್ಥಾನಗಳನ್ನು ತುಂಬಲು ಕೋರಿ ಪಿಐಎಲ್ ಸಲ್ಲಿಕೆ: ವಿಚಾರಣೆಯಿಂದ ಹಿಂದೆ ಸರಿದ ಸಿಜೆ ಎ.ಎಸ್.ಓಕ್

Update: 2019-05-29 17:09 GMT

ಬೆಂಗಳೂರು, ಮೇ 29: ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ)ಯಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಸ್ಥಾನಗಳನ್ನು ತುಂಬಲು ಸರಕಾರಕ್ಕೆ ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಿಂದೆ ಸರಿದಿದ್ದಾರೆ.

ಈ ಕುರಿತು ಮಲ್ಲೇಶ್ವರಂನ ಕೆ.ಸತೀಶ್ ಸೇರಿ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠದ ಮುಂದೆ ಬಂದಿತ್ತು. ಆದರೆ, ವಿಭಾಗೀಯ ನ್ಯಾಯಪೀಠವು ಅರ್ಜಿ ವಿಚಾರಣೆಯಿಂದ ಹಿಂದೆ ಸರಿಯಿತು.

ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ಸದ್ಯ ಹತ್ತು ನ್ಯಾಯಮೂರ್ತಿಗಳ ಸ್ಥಾನಗಳು ಖಾಲಿ ಇವೆ. ಹೀಗಾಗಿ, ಈ ಸ್ಥಾನಗಳನ್ನು ತುಂಬಲು ನಿರ್ದೇಶಿಸಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು. ಆದರೆ, ನ್ಯಾಯಪೀಠವು ಪೀಠದಿಂದ ಹಿಂದೆ ಸರಿದಿದೆ. ಕೇಂದ್ರ ಸರಕಾರ ಸೇರಿ ನಾಲ್ವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News