ರಾಹುಲ್ ಗಾಂಧಿಯನ್ನು ಭೇಟಿಯಾದ ಮುಖ್ಯಮಂತ್ರಿ ಕುಮಾರಸ್ವಾಮಿ

Update: 2019-05-30 14:11 GMT

ಹೊಸದಿಲ್ಲಿ, ಮೇ 30: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಕಾರ್ಯಕ್ರಮ ನಿಮಿತ್ತ ದಿಲ್ಲಿಗೆ ತೆರಳಿದ್ದ ಕುಮಾರಸ್ವಾಮಿ, ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ರಾಜ್ಯದ ಪ್ರಸಕ್ತ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದರು. ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸುಗಮವಾಗಿ ಕಾರ್ಯ ನಿರ್ವಹಿಸುತ್ತಿದೆ. ಕಾಂಗ್ರೆಸ್ ನಾಯಕರು ಅತ್ಯುತ್ತಮವಾಗಿ ಸಹಕಾರ ನೀಡುತ್ತಿದ್ದು, ಉತ್ತಮ, ಜನಪರ ಆಡಳಿತ ನೀಡುತ್ತಿದ್ದೇವೆ ಎಂದು ತಿಳಿಸಿದ ಕುಮಾರಸ್ವಾಮಿ, ರಾಷ್ಟ್ರ ರಾಜಕಾರಣಕ್ಕೆ ನಿಮ್ಮ ಅಗತ್ಯವಿದೆ. ಆದುದರಿಂದ ಎಐಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಬೇಕು ಎಂದು ಇದೇ ವೇಳೆ ಮನವಿ ಮಾಡಿದರು ಎಂದು ಗೊತ್ತಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News