ತಂಬಾಕು ನಿಯಂತ್ರಣ: ಉಡುಪಿ ಜಿಲ್ಲೆಯಲ್ಲಿ ಪರಿಣಾಮಕಾರಿ ಅನುಷ್ಠಾನ
ಉಡುಪಿ : ತಂಬಾಕು ಸೇವನೆಯಿಂದ ಪ್ರತಿ ವರ್ಷ 10 ಲಕ್ಷಕ್ಕಿಂತ ಹೆಚ್ಚು ಜನರು ಭಾರತದಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಅಂದಾಜಿಸಿದೆ. ಇತ್ತೀಚಿನ ಗ್ಲೋಬಲ್ ಅಡಲ್ಟ್ ಸಮೀಕ್ಷೆ 2015-16ರ ಪ್ರಕಾರ, ಭಾರತದಲ್ಲಿ ಸುಮಾರು ಶೇ.28ರಷ್ಟು ಜನರು ಯಾವುದಾ ದರೂ ಒಂದು ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಿದ್ದಾರೆ ಎಂದು ಹೇಳಿದೆ.
2009-10ರ ಗ್ಲೋಬಲ್ ಅಡಲ್ಟ್ ಸಮೀಕ್ಷೆ ಪ್ರಕಾರ, ಕರ್ನಾಟಕದಲ್ಲಿ ಸುಮಾರು 1.5 ಕೋಟಿ ಜನರು ಯಾವುದಾದರೂ ಒಂದು ರೀತಿಯ ತಂಬಾಕು ಉತ್ಪನ್ನಗಳನ್ನು ಸೇವನೆ ಮಾಡುತ್ತಿದ್ದಾರೆ. ಅದರಲ್ಲೂ ಮುಖ್ಯವಾಗಿ ಯುವಕ- ಯುವತಿಯರು ತಮ್ಮ 18ನೇ ವರ್ಷಕ್ಕೆ ತಂಬಾಕು ಸೇವನೆ ಮಾಡುತ್ತಿದ್ದಾರೆಂದು ತಿಳಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಪರೋಕ್ಷ ಧೂಮಪಾನದಿಂದ ಶೇ.37.2ರಷ್ಟು ಮಹಿಳೆಯರು ಹಾಗೂ ಮಕ್ಕಳು ಕ್ಯಾನ್ಸರ್ ಮುಂತಾದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತಿದ್ದಾರೆ ಎಂದು ಅದು ಹೇಳಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಇವರ ಸಹಬಾಗಿತ್ವದಲ್ಲಿ ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ವನ್ನು ಪರಿಣಾಮಕಾರಿ ರೀತಿಯಲ್ಲಿ ಅನುಷ್ಠಾನಗೊಳಿಸುತ್ತಿದೆ.
ಈ ಹಿನ್ನೆಲೆಯಲ್ಲಿ ರಾಜ್ಯ ತಂಬಾಕು ನಿಯಂತ್ರಣ ಘಟಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬೆಂಗಳೂರು, ಜಿಲ್ಲಾಡಳಿತ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಉಡುಪಿ ಇವರ ಸಹಬಾಗಿತ್ವದಲ್ಲಿ ಉಡುಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಪರಿಣಾಮಕಾರಿ ರೀತಿಯಲ್ಲಿ ಅನುಷ್ಠಾನಗೊಳಿಸುತ್ತಿದೆ.
ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ನಿಟ್ಟಿನಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಘಟಕವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದು, ನಿಯಮಿತವಾಗಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸಲಾ ಗುತ್ತಿದೆ. ಅಲ್ಲದೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ತನಿಖಾ ದಳಗಳನ್ನು ರಚಿಸಲಾಗಿದೆ.
ಈವರೆಗೆ ಜಿಲ್ಲೆಯಲ್ಲಿ 2,442 ಪ್ರಕರಣಗಳನ್ನು ದಾಖಲು ಮಾಡಿ, 3,52,940 ರೂ. ದಂಡ ಮೊತ್ತವನ್ನು ಸಂಗ್ರಹಿಸಿ ಸಾರ್ವಜನಿಕರಿಗೆ ತಂಬಾಕು ಸೇವನೆಯ ದುಷ್ಪರಿಣಾಮಗಳು ಹಾಗೂ ಕಾಯ್ದೆಯ ಬಗ್ಗೆ ಅರಿವು ಮೂಡಿಸಲಾ ಗಿದೆ. 2016ರ ನ.30ರಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ, ದೇಶದಲ್ಲಿಯೇ ಪ್ರಥಮ ಬಾರಿಗೆ ಸುಮಾರು 1,200 ಶಾಲೆಗಳಿಂದ ಒಂದು ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿ ಸಮುದಾಯದ ಮೂಲಕ ಜಿಲ್ಲೆಯಲ್ಲಿ ಏಕಕಾಲದಲ್ಲಿ ಗುಲಾಬಿ ಚಳುವಳಿ ಎನ್ನುವ ವಿನೂತನವಾದ ಆಂದೋಲನವನ್ನು ಹಮ್ಮಿಕೊಂಡು ಸುಮಾರು ಮೂರು ಸಾವಿರಕ್ಕಿಂತ ಹೆಚ್ಚು ತಂಬಾಕು ವ್ಯಾಪಾರಸ್ಥರಿಗೆ ಶಾಲೆಯ 100 ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ವ್ಯಾಪಾರ ಮಾಡದಂತೆ ತಿಳುವಳಿಕೆ ಮೂಡಿಸಲಾಗಿತ್ತು.
ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯ 106 ಶಾಲಾ-ಕಾಲೇಜುಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ ತಂಬಾಕು ಬಗ್ಗೆ ಅರಿವು ಮೂಡಿಸಲಾಗಿತ್ತು. ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ಹಮ್ಮಿ ಕೊಂಡು 4500 ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಗಿತ್ತು.
ತಂಬಾಕು ವ್ಯಸನದಿಂದ ಮುಕ್ತರಾಗಲು ತಂಬಾಕು ವ್ಯಸನ ಮುಕ್ತ ಕೇಂದ್ರ (Tobacco Cessation Centre-TCC )ವನ್ನು (ಕೊಠಡಿ ಸಂಖ್ಯೆ-22) ಜಿಲ್ಲಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಸ್ಥಾಪಿಸಿ, ಸಾರ್ವಜನಿಕರಿಗೆ ಉಚಿತ ಆಪ್ತ ಸಮಾಲೋಚನೆ ಹಾಗೂ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 1520 ರೋಗಿಗಳಿಗೆ ಆಪ್ತ ಸಮಾಲೋಚನೆ ಹಾಗೂ 642 ರೋಗಿಗಳು ಔಷಧೋಪಾಚಾರವನ್ನು ಪಡೆದಿದ್ದಾರೆ. ಅಲ್ಲದೇ ಪ್ರತಿ ತಿಂಗಳ 25ನೇ ತಾರೀಕಿನಂದು ಉಚಿತ ವೈದ್ಯಕೀಯ ಶಿಬಿರವನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಕೈಗೊಳ್ಳಲಾಗುತ್ತಿದೆ.
ಆರೋಗ್ಯ, ಪೋಲಿಸ್, ಶಿಕ್ಷಣ, ಗ್ರಾಮೀಣ ಅಭಿವೃದ್ಧಿ, ಸಾರಿಗೆ ಮುಂತಾದ ಪ್ರಮುಖ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಇಲಾಖೆಯ ಸುಮಾರು 250 ಅಧಿಕಾರಿಗಳಿಗೆ ಕೋಟ್ಪಾ-2003 ಕಾಯ್ದೆಯ ಪರಿಣಾಮಕಾರಿ ಅನುಷ್ಟಾನದ ಬಗ್ಗೆ ದಿ ಯೂನಿಯನ್ ನವದೆಹಲಿ ಇವರ ತಾಂತ್ರಿಕ ನೆರವಿನೊಂದಿಗೆ ತರಬೇತಿಯನ್ನು ನೀಡಲಾಗಿದೆ. ಹೋಟೆಲ್ ಮಾಲಕರು, ತಂಬಾಕು ವ್ಯಾಪಾರಸ್ಥ ರಿಗೆ ಕೋಟ್ಪಾ-2003 ಕಾಯ್ದೆಯನ್ನು ಸಮರ್ಪಕವಾಗಿ ಪಾಲಿಸುವಂತೆ ಮನವರಿಕೆ ಮಾಡಲಾಗಿದೆ.
ಈ ಬಗ್ಗೆ ಕೆಎಂಸಿ ಮಣಿಪಾಲ ಹಾಗೂ ಆರ್ಯಪ್ರತಿಷ್ಟಾನ (ಸರ್ಕಾರೇತರ ಸಂಸ್ಥೆ) ಮುಖಾಂತರ ಇತ್ತೀಚೆಗೆ ನಡೆಸಿದ ಸಮೀಕ್ಷೆಯ ಪ್ರಕಾರ ಜಿಲ್ಲೆಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾ ಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಮೇ 31ರಂದು ವಿಶ್ವ ತಂಬಾಕು ರಹಿತ ದಿನದಅಂಗವಾಗಿ ಬಜಗೋಳಿ ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿ ಗಳಿಂದ ‘ಗುಲಾಬಿ ಆಂದೋಲನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಇದರಲ್ಲಿ ಪ್ರತಿ ಅಂಗಡಿ/ ಹೋಟೇಲ್ ಮಾಲಕರಿಗೆ ತಲಾ ಒಂದು ಗುಲಾಬಿ ಹೂ ನೀಡುವುದರ ಮೂಲಕ ತಂಬಾಕು ಮುಕ್ತ ನಾಡನ್ನು ನಿರ್ಮಾಣ ಮಾಡಲು ಕೈಜೋಡಿಸಬೇಕೆಂದು ಅರಿವು ಮೂಡಿಸಲಾಗುತ್ತಿದೆ.