ಮೇ 31: ಉಡುಪಿ ಎಸ್ಪಿಯಿಂದ ಫೋನ್ ಇನ್ ಕಾರ್ಯಕ್ರಮ
Update: 2019-05-30 19:57 IST
ಉಡುಪಿ, ಮೇ 31: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಅವರ ನೇರ ಫೋನ್ ಇನ್(ದೂ.ಸಂ.: 0820-2534777) ಕಾರ್ಯಕ್ರಮವು ಮೇ 31ರಂದು ಬೆಳಗ್ಗೆ 10 ಗಂಟೆಯಿಂದ ಬೆಳಗ್ಗೆ 11ಗಂಟೆಯವರೆಗೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆಯಲಿದೆ.
ಸಾರ್ವಜನಿಕರು ಕಾರ್ಯಕ್ರಮಕ್ಕೆ ಕರೆ ಮಾಡಿ ತಮ್ಮ ಅಹವಾಲುಗಳು, ಅಕ್ರಮ ಚಟುವಟಿಕೆ ಕುರಿತು ಮಾಹಿತಿ ನೀಡಬಹುದು ಅಥವಾ ಪ್ರಕರಣಗಳ ಕುರಿತ ಮಾಹಿತಿಯನ್ನು ಪಡೆಯಬಹುದಾಗಿದೆ. ಕರೆ ಮಾಡಿದವರ ವಿವರವನ್ನು ಗುಪ್ತವಾಗಿ ಇಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.