×
Ad

ಮೇನಕಾ ಗಾಂಧಿ ಹಂಗಾಮಿ ಸ್ಪೀಕರ್

Update: 2019-05-30 20:24 IST

ಹೊಸದಿಲ್ಲಿ, ಮೇ 30 : ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದೆ, ಕಳೆದ ಮೋದಿ ಸರಕಾರದಲ್ಲಿ ಸಚಿವೆಯಾಗಿದ್ದ ಮೇನಕಾ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಉತ್ತರ ಪ್ರದೇಶದ ಸುಲ್ತಾನ್ ಪುರದಿಂದ ಈ ಬಾರಿ ಆಯ್ಕೆಯಾಗಿರುವ ಮೇನಕಾ ಗಾಂಧಿ ಹಂಗಾಮಿ ಸಭಾಪತಿಯಾಗಿ ನೂತನ ಸಂಸದರ ಪ್ರಮಾಣ ವಚನ ಕಾರ್ಯಕ್ರಮವನ್ನು ನೆರವೇರಿಸಿ ಕೊಡಲಿದ್ದಾರೆ.

ನೂತನ ಸಭಾಪತಿ ಆಯ್ಕೆಯಾಗುವವರೆಗೆ ಅವರು ಈ ಹುದ್ದೆಯಲ್ಲಿರಲಿದ್ದಾರೆ. ಅವರೇ ಸ್ಪೀಕರ್ ಆಗಿ ಆಯ್ಕೆಯಾಗುವ ಸಾಧ್ಯತೆಯೂ ಇದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News