ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಅನುದಾನ ಮಂಜೂರು
Update: 2019-05-30 20:58 IST
ಉಡುಪಿ, ಮೇ 30: ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ 2019-20ನೇ ಸಾಲಿನಲ್ಲಿ ಜಿಲ್ಲೆಗೆ ಒಟ್ಟು 32.14 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಈ ಬಗ್ಗೆ ಮಾರ್ಗಸೂಚಿಯನುಸಾರ ಕ್ರಿಯಾ ಯೋಜನೆ ತಯಾರಿಸುವ ಸಂಬಂಧ ಚರ್ಚಿಸುವ ಸಲುವಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ಮಣಿಪಾಲದ ಜಿಪಂ ಸಭಾಂಗಣದಲ್ಲಿ ಗುರುವಾರ ಸಬೆ ನಡೆಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿಂಧುಬಿ.ರೂಪೇಶ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ಜಿಪಂ ಸದಸ್ಯರು ಉಪಸ್ಥಿತರಿದ್ದರು.