ಪ್ರಧಾನಿ ಮೋದಿ ನೂತನ ಸಂಪುಟದಲ್ಲಿ ಅಮಿತ್ ಶಾ ವಿತ್ತ ಸಚಿವ?

Update: 2019-05-30 15:47 GMT

ಹೊಸದಿಲ್ಲಿ, ಮೇ.30: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುವಲ್ಲಿ ಮಹತ್ವದ ಪಾತ್ರ ನಿಭಾಯಿಸಿದ ಅಮಿತ್ ಶಾ ಗುರುವಾರದಂದು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನರೇಂದ್ರ ಮೋದಿ ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ರಾಜ್ಯದ ಸಹಾಯಕ ಗೃಹ ಸಚಿವರಾಗಿದ್ದ ಅಮಿತ್ ಶಾ ನೂತನ ಸರಕಾರದ ರಕ್ಷಣಾ ಸಂಪುಟ ಸಮಿತಿಯ ಭಾಗವಾಗಲಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಕಳೆದ ಬಾರಿ ಮೋದಿ ಸರಕಾರದಲ್ಲಿ ವಿತ್ತ ಸಚಿವರಾಗಿದ್ದ ಅರುಣ್ ಜೇಟ್ಲಿ ನೂತನ ಸರಕಾರದಲ್ಲಿ ಯಾವುದೇ ಜವಾಬ್ದಾರಿಯನ್ನು ಹೊಂದಲು ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅವರಿಗೆ ವಿತ್ತ ಖಾತೆಯ ಜವಾಬ್ದಾರಿ ನೀಡುವ ಸಾಧ್ಯತೆಯಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.

ಚುನಾವಣೆಯ ಸಮಯದಲ್ಲಿ ತಿಂಗಳಿಡೀ ಉತ್ತರ ಪ್ರದೇಶದಲ್ಲಿದ್ದು ಪಕ್ಷದ ಚುನಾವಣಾ ತಂತ್ರವನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತಂದ ಜೆ.ಪಿ ನಡ್ಡಾ ಅವರು ಬಿಜೆಪಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಸಾಧ್ಯತೆಯಿದೆ ಎಂದು ವರದಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News