×
Ad

ಮೇ 31ರಂದು ತಂಬಾಕು ಜಾಗೃತಿ ಜಾಥಾ, ಮಾಹಿತಿ ಕಾರ್ಯಕ್ರಮ

Update: 2019-05-30 21:18 IST

ಉಡುಪಿ, ಮೇ 30: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ, ಜಿಲ್ಲಾ ಆಸ್ಪತ್ರೆ, ಎನ್‌ಟಿಸಿಪಿ ಮತ್ತು ಎನ್‌ಪಿಸಿಡಿಸಿಎಸ್ ವಿಭಾಗ ಜಿಲ್ಲಾ ಆಸ್ಪತ್ರೆ ಉಡುಪಿ, ದಂತ ವೈದ್ಯಕೀಯ ವಿಭಾಗ ಜಿಲ್ಲಾ ಆಸ್ಪತ್ರೆ, ಭಾರತೀಯ ವೈದ್ಯಕೀಯ ಮಂಡಳಿ ಕರಾವಳಿ ಉಡುಪಿ ಜಿಲ್ಲೆ, ಭಾರತೀಯ ದಂತ ವೈದ್ಯಕೀಯ ಮಂಡಳಿ ಉಡುಪಿ, ರೋಟರಿ ಕ್ಲಬ್ ಅಂಬಲಪಾಡಿ ಉಡುಪಿ ಇವರ ಸಹಯೋಗದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ತಂಬಾಕು ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಕ್ರಮವನ್ನು ಮೇ 31ರಂದು ಬೆಳಗ್ಗೆ 8 ಗಂಟೆಯಿಂದ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ (ಪ್ರಬಾರ) ಡಾ.ಎಂ.ಜಿ.ರಾಮ ಉದ್ಘಾಟಿಸಲಿದ್ದು, ಉಡುಪಿ ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಸಂಬಂಧ ಉಡುಪಿ ಬೋರ್ಡ್ ಹೈಸ್ಕೂಲ್‌ನಿಂದ ಸಿಟಿ ಬಸ್‌ನಿಲ್ದಾಣ, ಸರ್ವಿಸ್ ಬಸ್‌ನಿಲ್ದಾಣ, ಡಯಾನ ಸರ್ಕಲ್ ಮಾರ್ಗವಾಗಿ ಜಿಲ್ಲಾ ಆಸ್ಪತ್ರೆ ಯವರೆಗೆ ಜಾಥಾ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News