ಸಾಲಿಗ್ರಾಮ ರೋಟರಿ ಕ್ಲಬ್‌ನಿಂದ ಪ್ರತಿಭಾ ಪುರಸ್ಕಾರ, ಸನ್ಮಾನ
Update: 2019-05-30 21:45 IST
ಉಡುಪಿ, ಮೇ 30: ರೋಟರಿ ಕ್ಲಬ್ ಕೋಟ-ಸಾಲಿಗ್ರಾಮದ ಸದಸ್ಯನಾಗಿ 25 ವರ್ಷಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ತನ್ನ ತಾಯಿ ಪದ್ದು ಆಚಾರ್ಯರ ನೆನಪಿನಲ್ಲಿ ಇದೇ ಜೂ.1ರಂದು ಕೋಟದ ಸುಹಾಸಿ ಸಭಾಂಗಣದಲ್ಲಿ ಪ್ರತಿಭಾ ಪುರಸ್ಕಾರ, ಸನ್ಮಾನ ಹಾಗೂ ವಿಕಲಚೇತನರಿಗೆ ಸಹಾಯಧನ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಕ್ಲಬ್‌ನ ಮಾಜಿ ಅಧ್ಯಕ್ಷ ಸೀತಾರಾಮ ಆಚಾರ್ ತಿಳಿಸಿದ್ದಾರೆ.
ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜೂ.1ರ ಸಂಜೆ 5:30ಕ್ಕೆ ಪ್ರಾರಂಭಗೊಳ್ಳುವ ಕಾರ್ಯಕ್ರಮವನ್ನು ಬಸರೂರಿನ ಮಾಜಿ ಶಾಸಕ ಬಿ.ಅಪ್ಪಣ್ಣ ಹೆಗ್ಡೆ ಉದ್ಘಾಟಿಸುವರು. ರೋಟರಿ ಕ್ಲಬ್ ಅಧ್ಯಕ್ಷ ಭರತ್‌ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನಪರಿಷತ್‌ನ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಭರತಕುಮಾರ್ ಶೆಟ್ಟಿ, ನಿಯೋಜಿತ ಅಧ್ಯಕ್ಷ ಗಣೇಶ ಹೊಳ್ಳ ಉಪಸ್ಥಿತರಿದ್ದರು.