ಮೋದಿ ಪ್ರಮಾಣವಚನ: ಬಿಜೆಪಿ ಕಾರ್ಯಕರ್ತರಿಂದ ಚಾ, ಪಕೋಡಾ ವಿತರಣೆ
Update: 2019-05-30 21:58 IST
ಬಂಟ್ವಾಳ, ಮೇ 30: ಪ್ರಧಾನಮಂತ್ರಿಯಾಗಿ ಎರಡನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದ ಸಂಭ್ರಮದಲ್ಲಿ ಬಂಟ್ವಾಳ ತಾಲೂಕಿನಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಿಸಿದರು.
ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಎದುರಲ್ಲಿ ಸಂಜೆಯಿಂದಲೇ ಬಿಜೆಪಿ ಕಾರ್ಯಕರ್ತರು ಚಹ, ಪಕೋಡಾ ವಿತರಿಸಲು ಆರಂಭಿಸಿದ್ದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಮಾಜಿ ಶಾಸಕ ಕೆ.ಪದ್ಮನಾಭ ಕೊಟ್ಟಾರಿ, ಕ್ಷೇತ್ರಾಧ್ಯಕ್ಷ ದೇವದಾಸ ಶೆಟ್ಟಿ, ಪಕ್ಷದ ಹಿರಿಯರಾದ ಜಿ.ಆನಂದ, ಜಿಪಂ ಸದಸ್ಯೆ ಕಮಲಾಕ್ಷಿ ಪೂಜಾರಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ, ಪಕ್ಷ ಪ್ರಮುಖರಾದ ರಾಮದಾಸ ಬಂಟ್ವಾಳ, ದಿನೇಶ್ ಅಮ್ಟೂರು, ಮೋನಪ್ಪ ದೇವಸ್ಯ, ರಂಜಿತ್ ಮೈರ, ರಮಾನಾಥ ರಾಯಿ, ಸುದರ್ಶನ ಬಜ ಸಹಿತ ಪುರಸಭೆ ಸದಸ್ಯರು, ಕಾರ್ಯಕರ್ತರು, ಮೋದಿ ಅಭಿಮಾನಿಗಳು ಈ ಸಂದರ್ಭ ಉಪಸ್ಥಿತರಿದ್ದರು.