×
Ad

ಸಮಾಜಕ್ಕೆ ಒಳಿತಾಗುವ ಕೆಲಸ ಮಾಡುವ ಛಲಬೇಕು: ಡಾ.ಪೀಟರ್ ಪಾವ್ಲ್ ಸಲ್ದಾನ

Update: 2019-05-30 22:06 IST

ಮಂಗಳೂರು, ಮೇ 30: ಸಮಾಜಕ್ಕೆ ಏನನ್ನಾದರೂ ಒಳಿತಾಗುವ ಕೆಲಸ ಮಾಡಬೇಕು ಎನ್ನುವ ಛಲ ಇದ್ದಾಗ ಆತನಿಂದ ಸಮಾಜಕ್ಕೆ ಒಳ್ಳೆದಾಗುತ್ತದೆ. ಈ ರೀತಿಯ ಸಕಾರಾತ್ಮಕ ಮನೋಭಾವದಿಂದ ಕೆಲಸ ಮಾಡುವವರಿಗೆ ಸಮಾಜವೂ ಪ್ರೋತ್ಸಾಹಿಸಬೇಕಾಗಿದೆ ಎಂದು ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮಧ್ಯಕ್ಷರಾದ ಅತೀ.ವಂ.ಡಾ.ಪೀಟರ್ ಪಾವ್ಲ್ ಸಲ್ದಾನ ತಿಳಿಸಿದ್ದಾರೆ.

ನಗರದ ಬಿಷಪ್ ಹೌಸ್‌ನಲ್ಲಿಂದು ಹಮ್ಮಿಕೊಂಡ ಪಿಂಗಾರ ನಿಯತಕಾಲಿಕದ 16ನೆ ವಾರ್ಷಿಕ ಕಾರ್ಯಕ್ರಮ ಹಾಗೂ ವೆಬ್ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಮಾಧ್ಯಮಗಳು ಸಮಾಜದ ಸಕಾರಾತ್ಮಕ ಬೆಳವಣಿಗೆಗೆ ಸಹಾಯ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಸಮಾರಂಭದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೋ ಶುಭ ಹಾರೈಸಿದರು. ಕರ್ನಾಟಕ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ಶುಭ ಹಾರೈಸಿದರು. ಪಿಂಗಾರ ಪತ್ರಿಕೆಯ ಸಂಪಾದಕ ರೆಮಂಡ್ ಡಿಕುನ್ಹಾ ಪ್ರಾಸ್ತಾವಿಕವಾಗಿ ಮಾತನಾಡಿದರು. ರಿಯಾನಾ ಡಿಕುನ್ಹಾ ಕಾರ್ಯಕ್ರಮ ನಿರೂಪಿಸಿದರು. ನತಾಲಿಯಾ ಡಿಕುನ್ಹಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News