×
Ad

ಕಲ್ಲಿನ ಕೋರೆಯಲ್ಲಿ ಆಯತಪ್ಪಿ ಬಿದ್ದು ಮಹಿಳೆ ಮೃತ್ಯು

Update: 2019-05-30 23:15 IST

ಬೆಂಗಳೂರು, ಮೇ 30: ಕಲ್ಲಿನ ಕೋರೆಯಲ್ಲಿ ಆಯತಪ್ಪಿ ನೀರಿಗೆ ಬಿದ್ದು ಮಹಿಳೆ ಮೃತಪಟ್ಟಿರುವ ಘಟನೆ ಇಲ್ಲಿನ ನೆಲಮಂಗಲದ ಕಂಬದಕಲ್ ಗ್ರಾಮದಲ್ಲಿ ನಡೆದಿದೆ.

ಕಂಬದಕಲ್‌ನ ಮಂಜುಳಾ (42) ಎಂಬಾಕೆ ಮೃತ ಮಹಿಳೆ ಎಂದು ಪೊಲೀಸರು ಗುರುತಿಸಿದ್ದಾರೆ.

ಗ್ರಾಮದಲ್ಲಿನ ನೀರಿನ ಸಮಸ್ಯೆಯಿಂದಾಗಿ ಕಲ್ಲಿನ ಕೋರೆರಿಯೊಂದರಲ್ಲಿ ಬಟ್ಟೆ ಒಗೆಯಲು ಹೋಗಿದ್ದ ಮಂಜುಳಾ, ಕಾಲು ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮಹಿಳೆ ಸಾವಿಗೆ ಬಿಟ್ಟಸಂದ್ರ ಗ್ರಾಮ ಪಂಚಾಯತ್ ಕಾರಣ ಎಂದು ಆರೋಪಿಸಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ನೆಲಮಂಗಲ ಪೊಲೀಸರು ಪರಿಶೀಲನೆ ನಡೆಸಿ ಪ್ರತಿಭಟನಾಕಾರರ ಮನವೊಲಿಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News