ಅಧ್ಯಕ್ಷ ಸ್ಥಾನ ತ್ಯಜಿಸದಂತೆ ರಾಹುಲ್ ಗಾಂಧಿಗೆ ಕುಮಾರಸ್ವಾಮಿ ಮನವಿ

Update: 2019-05-30 17:49 GMT

ಹೊಸದಿಲ್ಲಿ, ಮೇ.30: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಗುರುವಾರ ಹೊಸದಿಲ್ಲಿಯ ಅವರ ನಿವಾಸದಲ್ಲಿ ಭೇಟಿಯಾದ ಕರ್ನಾಟಕ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡದಂತೆ ಮನವಿ ಮಾಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಅಧ್ಯಕ್ಷಸ್ಥಾನದಿಂದ ಕೆಳಗಿಳಿಯದಂತೆ ನಾನು ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದ್ದೇನೆ. ಜೊತೆಗೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆಯೂ ಅವರಿಗೆ ಮಾಹಿತಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಹೊಸದಿಲ್ಲಿಗೆ ಆಗಮಿಸಿದ್ದ ಕುಮಾರಸ್ವಾಮಿ ಅದಕ್ಕೂ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾದರು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಆಘಾತಕಾರಿ ಸೋಲನುಭವಿಸಿದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News