×
Ad

ಸ್ಥಳೀಯ ಸಂಸ್ಥೆಗಳ ಚುನಾವಣೆ: ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸಿದ ಸಚಿವ ಖಾದರ್

Update: 2019-05-31 20:55 IST

ಮಂಗಳೂರು, ಮೇ 31: ರಾಜ್ಯಾದ್ಯಂತ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಆಯ್ಕೆಯಾದ ವಿಜಯಿ ಅಭ್ಯರ್ಥಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಭಿನಂದಿಸಿದ್ದಾರೆ.

ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅಗತ್ಯ ಸಂಪನ್ಮೂಲಗಳನ್ನು ಸೃಷ್ಟಿಸಲು ಹಾಗೂ ಬಳಸಿಕೊಳ್ಳಲು ರಾಜ್ಯ ಸರಕಾರದಿಂದ ಎಲ್ಲ ನೇರವನ್ನು ಒದಗಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

ಚುನಾವಣೆಯಲ್ಲಿ ವಿಜಯಿಗಳಾದ ಅಭ್ಯರ್ಥಿಗಳಿಗೆ ಹಾಗೂ ಮತದಾನ ಮಾಡಿದ ಮತದಾರರಿಗೆ ಉಸ್ತುವಾರಿ ಸಚಿವರು ಅಭಿನಂದನೆ ಸಲ್ಲಿಸಿದರು. ಜನರನ್ನು ಆರಿಸಿ ಕಳುಹಿಸಿದ ಜನಪ್ರತಿನಿಧಿಗಳು ಜನರ ವಿಶ್ವಾಸಕ್ಕೆ ಕುಂದು ಉಂಟಾಗದಂತೆ ಕೆಲಸ ಮಾಡಲು ಅವರು ಸಲಹೆ ನೀಡಿದರು. ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಅಧಿಕಾರಿಗಳನ್ನೂ ಸಚಿವರು ಅಭಿನಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News