×
Ad

ಹಣಕಾಸು ಖಾತೆ ನಿರ್ವಹಿಸುತ್ತಿರುವ ಎರಡನೇ ಮಹಿಳೆ ನಿರ್ಮಲಾ ಸೀತಾರಾಮನ್

Update: 2019-05-31 21:32 IST

ಹೊಸದಿಲ್ಲಿ, ಮೇ 31: ನರೇಂದ್ರ ಮೋದಿ ಸರಕಾರದ ನೂತನ ಸಂಪುಟದಲ್ಲಿ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವೆಯಾಗಿ ನಿಯೋಜಿತರಾಗಿದ್ದಾರೆ. ಇದರೊಂದಿಗೆ ಹಣಕಾಸು ಸಚಿವೆಯಾಗಿ ಕಾರ್ಯನಿರ್ವಹಿಸುತ್ತಿರುವ ಎರಡನೇ ಮಹಿಳೆ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಹಣಕಾಸು ಖಾತೆಯನ್ನು ನಿರ್ವಹಿಸಿದ ಮೊದಲ ಮಹಿಳೆ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ. 1970-71ರ ವರೆಗೆ ಪ್ರಧಾನಿಯಾಗಿದ್ದ ಸಂದರ್ಭ ಇಂದಿರಾ ಗಾಂಧಿ ಅವರು ಹಣಕಾಸು ಖಾತೆಯನ್ನು ಕೂಡ ನಿರ್ವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News