ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಮಾಜಿ ಸಚಿವ ರೇಣುಕಾಚಾರ್ಯ ಪೊಲೀಸ್ ವಶಕ್ಕೆ, ಬಿಡುಗಡೆ

Update: 2019-05-31 16:40 GMT

ಬೆಂಗಳೂರು, ಮೇ 31: ಮಾಜಿ ಸಚಿವ ರೇಣುಕಾಚಾರ್ಯ ವಿರುದ್ಧದ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಜಾರಿ ಮಾಡಿದ್ದರೂ ವಿಚಾರಣೆಗೆ ಗೈರು ಹಾಜರಾಗುತ್ತಿದ್ದ ಹಿನ್ನೆಲೆಯಲ್ಲಿ ನಗರದ ಜನಪ್ರತಿನಿಧಿಗಳ ಕೋರ್ಟ್, ರೇಣುಕಾಚಾರ್ಯರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲು ಆದೇಶಿಸಿ, ಬಳಿಕ ವಾರೆಂಟ್ರೀಕಾಲ್ ಮಾಡಿ, ಬಿಡುಗಡೆಗೊಳಿಸಿತು.

ಶುಕ್ರವಾರ ಬೆಳಗ್ಗೆ ರೇಣುಕಾಚಾರ್ಯ ತಮ್ಮ ಮೇಲಿರುವ ಜಾಮೀನು ರಹಿತ ವಾರೆಂಟ್ ರೀಕಾಲ್ ಮಾಡಿಸಲು ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ನ್ಯಾಯಾಧೀಶರು ಪದೇ ಪದೇ ವಿಚಾರಣೆಗೆ ಗೈರು ಆಗಿದ್ದಕ್ಕೆ ಸಂಜೆಯವರೆಗೆ ರೇಣುಕಾಚಾರ್ಯ ಕೋರ್ಟ್‌ನಲ್ಲೇ ಇರಬೇಕು ಎಂದು ನ್ಯಾ.ರಾಮಂದ್ರ ಡಿ. ಹುದ್ದಾರ್ ಆದೇಶಿಸಿದ್ದರು.

2016 ರಲ್ಲಿ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಕೇಸ್ ದಾಖಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News