ಅಪಹಾಸ್ಯಕ್ಕೆ ಗುರಿಯಾಗುತ್ತಿರುವ ಬಿಜೆಪಿ: ಗೃಹ ಸಚಿವ ಎಂ.ಬಿ.ಪಾಟೀಲ್

Update: 2019-05-31 17:11 GMT

ಬೆಂಗಳೂರು, ಮೇ 31: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ಸುಭದ್ರವಾಗಿದ್ದು, ಇನ್ನೂ ನಾಲ್ಕು ವರ್ಷ ಮುಖ್ಯಮಂತ್ರಿ ಕುಮಾರಸ್ವಾಮಿ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿನ ತನ್ನ ಕೊಠಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆಪರೇಷನ್ ಕಮಲ’, ಆಪರೇಷನ್ ಕಮಲ ಆಗಿಯೇ ಉಳಿಯಲಿದೆ. ಬಿಜೆಪಿಯವರ ಕನಸು ಎಂದಿಗೂ ನನಸಾಗುವುದಿಲ್ಲ. ಸರಕಾರ ಅಸ್ಥಿರದ ಪ್ರಯತ್ನದ ಮೂಲಕ ಬಿಜೆಪಿ ಅಪಹಾಸ್ಯಕ್ಕೆ ಗುರಿಯಾಗುತ್ತಿದೆ ಎಂದು ಲೇವಡಿ ಮಾಡಿದರು.

ಜನಾದೇಶವನ್ನು ಒಪ್ಪಿಕೊಂಡು ಬಿಜೆಪಿ ವಿಪಕ್ಷ ಸ್ಥಾನದಲ್ಲಿ ಕೂತು ಕೆಲಸ ಮಾಡಬೇಕು. ಲೋಕಸಭೆ ಚುನಾವಣಾ ಫಲಿತಾಂಶವನ್ನು ನಾವು ತಲೆಬಾಗಿ ಒಪ್ಪಿಕೊಂಡಿದ್ದೇವೆ ಎಂದ ಅವರು, ಬಿಜೆಪಿ ಇನ್ನಾದರೂ ಸರಕಾರ ಅಸ್ಥಿರಗೊಳಿಸುವ ಪ್ರಯತ್ನವನ್ನು ನಿಲ್ಲಿಸಬೇಕು ಎಂದು ಸಲಹೆ ಮಾಡಿದರು.

ಸಂಪುಟ ಪುನಾರಚನೆ, ವಿಸ್ತರಣೆಯ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ: ಅವರು ಯಾವುದೇ ನಿರ್ಧಾರ ಕೈಗೊಂಡರೂ ಅದನ್ನು ಎಲ್ಲರೂ ಪಾಲಿಸಲಿದ್ದಾರೆ ಎಂದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಸದ್ಯ ಖಾಲಿ ಇಲ್ಲ. ದಿನೇಶ್ ಗುಂಡೂರಾವ್ ಅಧ್ಯಕ್ಷರಾಗಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News