ಕನ್ನಡ ಕಲಿಕೆಯಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ‘ಪ್ರತಿಭಾ ಪುರಸ್ಕಾರ’ಕ್ಕೆ ಆಹ್ವಾನ
ಮಂಗಳೂರು, ಜೂ.1: ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಾಥಮಿಕ, ಪ್ರೌಢ, ಪದವಿಪೂರ್ವ ಹಾಗೂ ಕಾಲೇಜು ಮಟ್ಟದಲ್ಲಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಶೇ.100 ಅಂಕ ಗಳಿಸಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಲ್ಲದೆ ವಿಶ್ವ ವಿದ್ಯಾನಿಲಯ ಮಟ್ಟದಲ್ಲಿ ಪಿಎಚ್‌ಡಿ ಮಾಡಿರುವ ಪ್ರತಿಭಾನ್ವಿತರನ್ನು ಪ್ರೋತ್ಸಾಸುವ ನೆಲೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ‘ಪ್ರತಿಭಾ ಪುರಸ್ಕಾರ’ ನೀಡಿ ಗೌರವಿಸಲಿದೆ.
ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿತು, ಮುಂದೆ ಕಾಲೇಜು ಹಾಗೂ ವಿಶ್ವವಿದ್ಯಾನಿಲಯಗಳಲ್ಲೂ ಅಧಿಕ ಅಂಕ ಪಡೆದು ಸಾಧನೆಗೈದಿರುವ ವಿದ್ಯಾರ್ಥಿಗಳಲ್ಲದೆ ಶೇ.100 ಫಲಿತಾಂಶ ಪಡೆದಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ಗೌರವಿಸಲಾಗುವುದೆಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾಹಿತಿಗೆ ವಿಳಾಸ ಹಾಗೂ ದೂರವಾಣಿ ಸಂಖ್ಯೆಯೊಂದಿಗೆ ಅರ್ಜಿಗಳನ್ನು ವಾಸುದೇವ ರಾವ್ ಕುಡುಪು, ಗೌರವ ಸಂಚಾಲಕರು ‘ಪ್ರತಿಭಾ ಪುರಸ್ಕಾರ’ ವಿಭಾಗ, ದ.ಕ. ಜಿಲ್ಲಾ ಕನ್ನಡ ಸಾತ್ಯ ಪರಿಷತ್ತು, ಶ್ರೀ ಕೃಷ್ಣ ಸಂಕೀರ್ಣ, ಕೊಡಿಯಾಲ್‌ಬೈಲ್, ಮಂಗಳೂರು ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ.