ಕ್ಲಬ್‌ಗಳ ಮೇಲೆ ಸಿಸಿಬಿ ದಾಳಿ: 26 ಮಂದಿ ಬಂಧನ, 1.4 ಲಕ್ಷ ನಗದು ಜಪ್ತಿ
Update: 2019-06-01 19:49 IST
ಬೆಂಗಳೂರು, ಜೂ.1: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ಕ್ಲಬ್‌ಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲಿಸರು 26 ಜನರನ್ನು ಬಂಧಿಸಿ, 1.48 ಲಕ್ಷ ನಗದು ಜಪ್ತಿ ಮಾಡಿದ್ದಾರೆ.
ಅಶೋಕನಗರ ವ್ಯಾಪ್ತಿಯ ರೆಸಿಡೆನ್ಸಿ ರಸ್ತೆಯಲ್ಲಿರುವ ಕ್ಲಬ್‌ಗಳಲ್ಲಿ ಹಣವನ್ನು ಕಟ್ಟಿಕೊಂಡ ಡಾರ್ಟ್‌ಗೇಮ್ ಎಂಬ ಜೂಜಾಟವಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಗಳ ವಿರುದ್ಧ ಇಲ್ಲಿನ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಮುಂದುವರೆಸಲಾಗಿದೆ.