ಕಾಸರಗೋಡು ಜಿಲ್ಲಾ ಕುಲಾಲ್ ಸಂಘದ ಅಧ್ಯಕ್ಷರಾಗಿ ರವೀಂದ್ರ ಮುನ್ನಿಪ್ಪಾಡಿ
Update: 2019-06-01 20:02 IST
ಮಂಗಳೂರು, ಜೂ.1: ಕಾಸರಗೋಡು ಜಿಲ್ಲಾ ಕುಲಾಲ್ ಸಂಘ ಮಂಜೇಶ್ವರ ಇದರ ನೂತನ ಪ್ರಥಮ ಅಧ್ಯಕ್ಷರಾಗಿ ಮಂಗಳೂರಿನ ನ್ಯಾಯವಾದಿ ರವೀಂದ್ರ ಮುನ್ನಿಪ್ಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಮೊದಲು ತಾಲೂಕು ಸಂಘದ ಅಧ್ಯಕ್ಷರಾಗಿ, ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ, ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇತಿಹಾಸ ಪ್ರಸಿದ್ಧ ಶ್ರೀವೀರನಾರಾಯಣ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕರ್ನಾಟಕ ಲೋಕಾಯುಕ್ತದ ದ.ಕ. ಜಿಲ್ಲೆಯ ವಿಶೇಷ ನ್ಯಾಯಾಲಯದ ಹೆಚ್ಚುವರಿ ವಿಶೇಷ ಸರಕಾರಿ ಅಭಿಯೋಜಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಪ್ಯಾನೆಲ್ ನ್ಯಾಯವಾದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.