×
Ad

ಉಡುಪಿ: ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

Update: 2019-06-01 20:10 IST

ಉಡುಪಿ, ಜೂ.1:ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಪಲಿಮಾರು ಮಠದ ಮಹತ್ವದ ಯೋಜನೆಯಾದ  ಸುವರ್ಣಗೋಪುರ ಶಿಖರ ಪ್ರತಿಷ್ಠಾ ಹಾಗೂ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಛಾಯಾಚಿತ್ರಗ್ರಾಹಕರಿಂದ ಸಂಗ್ರಹಿಸಿದ ಛಾಯಾಚಿತ್ರಗಳ ಪ್ರದರ್ಶನ ‘ದರ್ಶನಗೋಪುರಮ್’ನ್ನು ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀ, ಸೋಸಲೆ ವ್ಯಾಸರಾಜ ಮಠಾಧೀಶರಾದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀ ಅವರ ಛಾಯಾಚಿತ್ರವನ್ನು ಕ್ಯಾಮರಾದಲ್ಲಿ ಸೆರೆ ಹಿಡಿಯುವ ಮೂಲಕ ಉದ್ಘಾಟಿಸಿದರು.

ಬಳಿಕ ಪ್ರದರ್ಶನದಲ್ಲಿ ಪ್ರದರ್ಶನಕ್ಕಿಟ್ಟ ಕೃಷ್ಣ ಮಠಕ್ಕೆ ಹಾಗೂ ಸ್ವಾಮೀಜಿಗಳಿಗೆ ಸಂಬಂಧಪಟ್ಟ ಛಾಯಾಚಿತ್ರಗಳ ಪ್ರದರ್ಶನವನ್ನು ಅಮೂಲಾಗ್ರ ವಾಗಿ ವೀಕ್ಷಿಸಿದ ಉಭಯಶ್ರೀಗಳು ಪ್ರದರ್ಶನದ ಬಗ್ಗೆ, ಛಾಯಾಚಿತ್ರಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪರ್ಯಾಯ ಮಠದ ಪ್ರಹ್ಲಾದ ರಾವ್, ಗಿರೀಶ ಆಚಾರ್ಯ, ಶೇಷಗಿರಿ ರಾವ್, ಛಾಯಾಚಿತ್ರಗ್ರಾಹಕರಾದ ಜನಾರ್ದನ್ ಕೊಡವೂರು, ಪರಶುರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News