ಪಡುಬಿದ್ರಿ ಬೀಚ್‌ನಲ್ಲಿ ಜೂ.5ರಂದು ಸ್ವಚ್ಛತಾ ಕಾರ್ಯಕ್ರಮ
Update: 2019-06-01 21:25 IST
ಉಡುಪಿ, ಜೂ.1: ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಗಳ ಸಹಯೋಗದೊಂದಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂ.5ರಂದು ಬೆಳಗ್ಗೆ 8 ಗಂಟೆಗೆ ಪಡುಬಿದ್ರಿ ಬೀಚ್‌ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ವಿವಿಧ ಪರಿಸರ ಸಂರಕ್ಷಣಾ ಸಂರಕ್ಷಣಾ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.