×
Ad

ಉಡುಪಿ : ಉಚಿತ ಕಂಪ್ಯೂಟರ್ ತರಬೇತಿಗೆ ನೋಂದಣಿ

Update: 2019-06-01 21:33 IST

 ಉಡುಪಿ, ಮೇ 31:ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉಡುಪಿ ಇಲ್ಲಿ ಬೇಸಿಕ್ ಕಂಪ್ಯೂಟರ್, ಕನ್ನಡನುಡಿ ಟೈಪಿಂಗ್ ತರಬೇತಿಯನ್ನು ಪಡೆಯಲು ಇಚ್ಚಿಸುವ ಆಸಕ್ತ ಯುವಕ, ಯುವತಿಯರು, ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ತರಬೇತಿಯು ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574869, 9480259790ನ್ನು ಸಂಪರ್ಕಿ ಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News