ಸುವರ್ಣ ಗೋಪುರ ಸಮರ್ಪಣೆ: ವಿಶೇಷ ಅಂಚೆಕವರ್ ಬಿಡುಗಡೆ
Update: 2019-06-01 22:08 IST
ಉಡುಪಿ, ಜೂ.1: ಉಡುಪಿ ಕೃಷ್ಣನಿಗೆ ಸುವರ್ಣ ಗೋಪುರ ಸಮರ್ಪ ಣೋತ್ಸವದ ಅಂಗವಾಗಿ ಮಂಗಳೂರಿನ ಕಲ್ಕೂರ ಪ್ರತಿಷ್ಠಾನದ ಪ್ರಾಯೋಜಕತ್ವದಲ್ಲಿ ಅಂಚೆ ಇಲಾಖೆ ಹೊರತಂದ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ರಾಜಾಂಗಣದಲ್ಲಿ ನಡೆಯಿತು.
ಪರ್ಯಾಯ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಅದಮಾರು ಕಿರಿಯ ಯತಿಗಳಾದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು 20ರೂ. ಬೆಲೆಯ ವಿಶೇಷ ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ದಕ್ಷಿಣ ಕರ್ನಾಟಕ ಕ್ಷೇತ್ರ ಅಂಚೆ ಇಲಾಖೆಯ ಸಹಾಯಕ ನಿರ್ದೇಶಕ ಅನಂತರಾಮ್, ಉಡುಪಿ ವಿಭಾಗದ ಅಂಚೆ ಅಧೀಕ್ಷಕ ಸುಧಾಕರ ದೇವಾಡಿಗ, ಹಿರಿಯ ಪತ್ರಕರ್ತೆ ಸಂಧ್ಯಾ ಪೈ, ಪ್ರದೀಪ್‌ಕುಮಾರ್ ಕಲ್ಕೂರ ಹಾಗೂ ಇತರರು ಉಪಸ್ಥಿತರಿದ್ದರು.