×
Ad

ನಾಲ್ಕನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ

Update: 2019-06-01 22:15 IST

ಬೆಂಗಳೂರು, ಜೂ.1: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹುಳಿಮಾವು ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆ ಮೇಲಿಂದ ಬೀಳುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶುಭಾ(45) ಎಂಬಾಕೆ ಮೃತ ಮಹಿಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಳಿಮಾವು ಅಪಾರ್ಟ್‌ಮೆಂಟ್‌ವೊಂದರಲ್ಲಿ ವಾಸವಾಗಿದ್ದ ಶುಭಾ, ಮೆಕ್ಯಾನಿಕಲ್ ಇಂಜಿನಿಯರ್ ಜಯನಂದನ್ ಎಂಬುವರನ್ನು ಎಂಟು ವರ್ಷದ ಹಿಂದೆ ವಿವಾಹವಾಗಿದ್ದರು. ಹಲವು ವರ್ಷಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನೂ ಅವರು ಪಡೆಯುತ್ತಿದ್ದರು ಎಂದು ಹೇಳಲಾಗುತ್ತಿದೆ.

ಕಳೆದ ಮೂರು ತಿಂಗಳಿಂದ ಬಾಯಿ ಹುಣ್ಣಿನಿಂದ ಬಳಲುತ್ತಿದ್ದು, ಮಡಿವಾಳದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಬೆಳಗ್ಗೆ ಅಪಾರ್ಟ್ ಮೆಂಟ್‌ನ ನಾಲ್ಕನೇ ಮಹಡಿಗೆ ಬಂದಿದ್ದ ಶುಭಾ, ಖಿನ್ನತೆಗೆ ಒಳಗಾಗಿ ಮಹಡಿಯಿಂದ ಜಿಗಿದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಹುಳಿಮಾವು ಠಾಣಾ ಪೊಲೀಸರು ತನಿಖೆ ಕೈಗೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News