ಬಂಟ್ವಾಳ : ಮಾರಣಾಂತಿಕ ಹಲ್ಲೆ, ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳು ಸೆರೆ

Update: 2019-06-01 16:47 GMT

ಬಂಟ್ವಾಳ : ಲೊರೆಟ್ಟೊ ಎಂಬಲ್ಲಿ ನಿತಿನ್ ಎಂಬವರಿಗೆ ಮಾರಣಾಂತಿಕವಾಗಿ ಹಲ್ಲೆಗೈದು  ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಟ್ವಾಳ ನಗರ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಲೊರೆಟ್ಟೋ ನಿವಾಸಿಗಳಾದ ಚೇತನ್, ರಾಕೇಶ್ ಬಂಧಿತ ಆರೋಪಿಗಳು.

ಪೆದಮಲೆ ನಿವಾಸಿ ನಿತಿನ್ ರಸ್ತೆ ಬದಿಯಲ್ಲಿ ಬೈಕನ್ನು ನಿಲ್ಲಿಸಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ, ದ್ವಿಚಕ್ರ ವಾಹನದಲ್ಲಿ ಬಂದ ಆರೋಪಿಗಳು ರಾಡ್ ನಿಂದ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆಗೆ ಯತ್ನಿಸಲಾಗಿದೆ ಎಂದು  ನಿತಿನ್ ಕುಮಾರ್ ದೂರಿನಂತೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಶನಿವಾರ ಆರೋಪಿಗಳಿಬ್ಬರನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಗಾಯಾಳು ನಿತಿನ್ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದು, ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News